Connect with us

Karnataka

ವಿಜಯಪುರದಲ್ಲಿ ರಾತ್ರಿಯಿಡೀ ಧಾರಾಕಾರ ಮಳೆ

Published

on

– ದ್ರಾಕ್ಷಿ, ಬಾಳೆ ಇತರೆ ಬೆಳೆಗಳು ಹಾನಿ

ವಿಜಯಪುರ: ಜಿಲ್ಲೆಯಾದ್ಯಂತ ವರುಣ ಅಬ್ಬರಿಸಿ ಬೊಬ್ಬಿರಿದಿದ್ದು, ಧಾರಾಕಾರ ಮಳೆಯಿಂದಾಗಿ ದ್ರಾಕ್ಷಿ, ಬಾಳೆ ಸೇರಿದಂತೆ ವಿವಿಧ ಬೆಳೆಗಳು ಹಾನಿಗೀಡಾಗಿವೆ.

ವಿಜಯಪುರ, ಬಸವನ ಬಾಗೇವಾಡಿ, ಮುದ್ದೇಬಿಹಾಳ, ಸಿಂದಗಿ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದೆ. ಬೆಳಗ್ಗೆಯಾದರೂ ಮಳೆಯ ಆರ್ಭಟ ಮುಂದುವರಿದಿದ್ದು, ಮಳೆಯಿಂದಾಗಿ ಇಡೀ ಜಿಲ್ಲೆಯಲ್ಲಿ ತಂಪು ವಾತಾವರಣ ನಿರ್ಮಾಣವಾಗಿದೆ. ಆದರೆ ಹಲವು ಬೆಳೆಗಳು ಹಾನಿಗೀಡಾಗಿವೆ.

ಕಳೆದೆರಡು ದಿನಗಳಿಂದ ತಾಪಮಾನ ಹೆಚ್ಚಾಗಿತ್ತು. ಬಿಸಿಲಿನ ಬೇಗೆಯಲ್ಲಿ ಬೇಯುತ್ತಿದ್ದ ಜಿಲ್ಲೆಗೆ ಮಳೆರಾಯ ತಂಪೆರೆದಿದ್ದು, ತಂಪಿನ ವಾತಾವರಣ ನಿರ್ಮಾಣವಾಗಿದೆ. ಆದರೆ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ದ್ರಾಕ್ಷಿ, ಬಾಳೆ, ಸೇರಿದಂತೆ ಇತರೆ ಬೆಳೆಗಳು ಹಾನಿಗೀಡಾಗಿದ್ದು, ರೈತರನ್ನು ಆತಂಕಕ್ಕೀಡು ಮಾಡಿದೆ. ಲಾಕ್‍ಡೌನ್ ನಿಂದ ಮೊದಲೇ ನಷ್ಟದಲ್ಲಿರುವ ರೈತರು ಮಳೆಯಿಂದಾಗಿ ಮತ್ತೆ ಅತಂತ್ರರಾಗಿದ್ದಾರೆ.