ಯಾದಗಿರಿ: ಜಿಲ್ಲೆಯಾದ್ಯಂತ ಭಾನುವಾರ ತಡ ರಾತ್ರಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯಿಂದಾಗಿ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಹರಿಬಿಡಲಾಗಿದೆ.
ಯಾದಗಿರಿ (Yadagiri) ನಗರದ ಹೊರವಲಯದಲ್ಲಿರುವ ಗುರುಸಣಗಿ ಬ್ರಿಜ್ ಕಂ ಬ್ಯಾರೇಜ್ ನಿಂದ ಭೀಮಾ ನದಿಗೆ 6 ಗೇಟ್ ಗಳನ್ನ ಓಪನ್ ಮಾಡಿ, ಬರೋಬ್ಬರಿ 15 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಹೀಗಾಗಿ ನದಿ ಪಾತ್ರದ ವೀರಾಂಜನೇಯ ಹಾಗೂ ಕಂಗಳೇಶ್ವರ ದೇವಸ್ಥಾನಗಳಿಗೆ ಜಲದಿಗ್ಬಂಧನವಾಗಿದೆ. ಹೀಗಾಗಿ ಭಕ್ತರಿಗೆ ದೇವರ ದರ್ಶನ ಸಿಕ್ಕಿಲ್ಲ.
ಮತ್ತೊಂದೆಡೆ ಸುರಿದ ಭಾರೀ ಮಳೆಯಿಂದಾಗಿ ನಗರದ ಲುಂಬಿನಿ ಗಾರ್ಡನ್ ಗೆ ನೀರು ನುಗ್ಗಿದ್ದು, ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
Web Stories