ಬೆಂಗಳೂರು: ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಈ ಮುಂಗಾರಿಗೂ ಮುನ್ನವೇ ವರುಣನ ಆರ್ಭಟ ಶುರುವಾಗುವ ಲಕ್ಷಣಗಳು ಕಂಡುಬರುತ್ತಿದೆ. ರಾಜ್ಯದಲ್ಲಿ ಇಂದಿನಿಂದ ಮೂರು-ನಾಲ್ಕು ದಿನ ಭಾರೀ ಮಳೆ (Rain Alert) ಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ 3 ದಿನಗಳ ಕಾಲ ಧಾರಕಾರ ಮಳೆಯ ಎಚ್ಚರಿಕೆಯನ್ನು ಇಲಾಖೆ ನೀಡಿದೆ. ಗುಡುಗು ಮಿಂಚು ಸಹಿತ ಬಿರುಗಾಳಿಯ ಆರ್ಭಟ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: KR Circle ಅಂಡರ್ ಪಾಸ್ ದುರಂತ- ಒಂದು ಸಾವಾದ್ರೂ ಎಚ್ಚೆತ್ತುಕೊಳ್ಳದ ಬಿಬಿಎಂಪಿ
Advertisement
Advertisement
ಮೇ 30 ಮತ್ತು 31 ರಂದು ಧಾರಾಕಾರ ಮಳೆಯಾಗುವ ಸಂಭವವಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ.
Advertisement
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ.
Advertisement