ಇಂದಿನಿಂದ ಜೂನ್ 30ರ ವರೆಗೆ ಭಾರೀ ಮಳೆ ಸಾಧ್ಯತೆ

Public TV
1 Min Read
RAIN 1 1

– ಬೆಂಗ್ಳೂರಲ್ಲಿ ಇಂದು ಬೆಳಗ್ಗೆ ತುಂತುರು ಮಳೆ

ಬೆಂಗಳೂರು: ಇಂದಿನಿಂದ ಜೂನ್ 30ರ ವರೆಗೆ ಐದು ದಿನಗಳ ಕಾಲ ರಾಜ್ಯದ ಎಲ್ಲಾ ಭಾಗಗಳಲ್ಲಿ ಭಾರೀ ಮಳೆಯಾಗುವ (Rain) ಮುನ್ಸೂಚನೆ ಸಿಕ್ಕಿದೆ.

ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಅನ್ನು ರಾಜ್ಯ ಹವಾಮಾನ ಇಲಾಖೆ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಇನ್ನು ಕೋಟೆ, ಗದಗ, ಬೀದರ್, ರಾಯಚೂರು, ಬಳ್ಳಾರಿ ಹಾಗೂ ಯಾದಗಿರಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಮುಂಗಾರು ಚುರುಕು; ಕೆಆರ್‌ಎಸ್‌ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ

ಬೆಂಗಳೂರಲ್ಲೂ ಮುಂದಿನ ಮೂರು ದಿನಗಳ ಕಾಲ ಮಳೆ ಸಾಧ್ಯತೆ ಇದೆ. ಇಂದಿನಿಂದ ಜೂನ್ 29ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಸದ್ಯ ನಗರದಲ್ಲೆಡೆ ಮೋಡ ಕವಿದ ವಾತಾವರಣವಿದ್ದು, ಮುಂಜಾನೆಯಿಂದಲೇ ನಗರದ ಕೆಲವು ಭಾಗದಲ್ಲಿ ತುಂತುರು ಮಳೆಯಾಗಿದೆ. ಇದೇ ರೀತಿ ಮುಂದಿನ ಮೂರು ದಿನಗಳ ಕಾಲ ವಾತಾವರಣ ಇರುವ ಸಾಧ್ಯತೆಗಳಿವೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

Share This Article