ಬೆಂಗಳೂರು: ರಾಜ್ಯಾದ್ಯಂತ ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ 7 ಜಿಲ್ಲೆಗಳಲ್ಲಿಯೂ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಮುರುಘಾ ಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಇಂದು ಅಪ್ರಾಪ್ತೆಯರಿಗೆ ಮೆಡಿಕಲ್ ಟೆಸ್ಟ್
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ತುಮಕೂರು, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಮನಗರ ಜಿಲ್ಲೆಗಳಲ್ಲಿಯೂ ಅಧಿಕ ಮಳೆಯಾಗಲಿದೆ. ಒಟ್ಟಾರೆ ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಸಹಿತ ಮಳೆಯಾಗುವ ಸಂಭವವಿದೆ ಎಂದು ಸೂಚಿಸಿದೆ. ಇದನ್ನೂ ಓದಿ: ಕೋಳಿ ಕೇಳಿ ಮಸಾಲೆ ಅರೆಯೋಕೆ ಆಗುತ್ತಾ- ಜಮೀರ್ಗೆ ಆರ್.ಅಶೋಕ್ ಟಾಂಗ್