ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸೋಮವಾರದಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಮುಂಗಾರು ಚುರುಕುಗೊಂಡಿರುವುದರಿಂದ ಹಾಗೂ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಹೆಚ್ಚು ಪ್ರಮಾಣದಲ್ಲಿ ಮಳೆಯಾಗಬಹುದು. ಸೆಪ್ಟೆಂಬರ್ 23, 24, 25 ಹಾಗೂ 26ರಂದು ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದೆ.
Advertisement
Advertisement
ಹವಾಮಾನ ಇಲಾಖೆಯಿಂದ ಬೆಂಗಳೂರಿಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪ್ರಾರಂಭವಾಗಿದೆ. ಪರಿಣಾಮ 7ರಿಂದ 11 ಸೆಂ.ಮೀ ಮಳೆಯಾಗಲಿದ್ದು, ಗುಡುಗು ಸಿಡಿಲು ಸಹಿತ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ತಜ್ಞ ರಾಜರಮೇಶ್ ಅವರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.
Advertisement
ಬೆಂಗಳೂರು ನಗರ ಅಷ್ಟೇ ಅಲ್ಲದೆ ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆ ಬರುವ ಸಾಧ್ಯತೆ ಇದೆ ಎಂದು ರಾಜರಮೇಶ್ ತಿಳಿಸಿದ್ದಾರೆ.