Bengaluru City

ರಾಜ್ಯದಲ್ಲಿ ಇಂದು, ನಾಳೆ ಮಳೆ ಸಾಧ್ಯತೆ-ಯೆಲ್ಲೋ ಅಲರ್ಟ್ ಘೋಷಣೆ

Published

on

Share this

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ 2 ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ನೈಋತ್ಯ ಮುಂಗಾರು ಅಂತ್ಯವಾಗಿದೆ. ಆದರೆ ಚಂಡಮಾರುತದ ಪ್ರಭಾವ ಇದ್ದು ಆ ಕಾರಣದಿಂದ ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೊಡಗಿನಲ್ಲಿ ಮಂಗಳವಾರ ಹಾಗೂ ಬುಧವಾರ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ:  ಮನೆಗೆ ಹೊಸ ಅತಿಥಿಯನ್ನು ಸ್ವಾಗತಿಸಿದ ಆಲ್ ಒಕೆ ಅಲೋಕ್ ಬಾಬು

ರಾಜ್ಯದಲ್ಲಿ ಇಷ್ಟು ದಿನಗಳ ಕಾಲ ಬಿರುಸಿನ ಮಳೆ ಸುರಿದರೂ ಸಹ ಈ ಬಾರಿ ರಾಜ್ಯದಲ್ಲಿ ಒಟ್ಟಾರೆಯಾಗಿ 8% ಮಳೆ ಕೊರತೆಯೊಂದಿಗೆ ಮುಂಗಾರು ಅವಧಿ ಅಂತ್ಯವಾಗುತ್ತಿದೆ ಎಂಬ ಅಚ್ಚರಿಯ ವಿಚಾರ ಬೆಳಕಿಗೆ ಬಂದಿದೆ. ಆಗಸ್ಟ್ ತಿಂಗಳಿನಲ್ಲಿ 47% ಮಳೆ ಕೊರತೆ ಉಂಟಾಗಿತ್ತು. ಸೆಪ್ಟೆಂಬರ್ ತಿಂಗಳಿನಲ್ಲಿ ಅಧಿಕ ಮಳೆಯಾಗಿದ್ದು, ರಾಜ್ಯದಲ್ಲಿ ಒಟ್ಟಾರೆ 8% ಮಳೆ ಕೊರತೆಯಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:  WhatsApp, Facebook, Instagram ಬಂದ್ – 9 ಗಂಟೆಯಲ್ಲಿ ಜುಕರ್‌ಬರ್ಗ್‌ಗೆ 44 ಸಾವಿರ ಕೋಟಿ ನಷ್ಟ

ಎರಡು ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ.

rain

ಕಳೆದ ಜೂನ್-ಜುಲೈ ತಿಂಗಳಲ್ಲಿ ಅಬ್ಬರಿಸಿದ್ದ ಮಳೆರಾಯ, ಆಗಸ್ಟ್ ತಿಂಗಳಲ್ಲಿ ಕೊಂಚ ವಿರಾಮ ನೀಡಿದ್ದ. ಈಗ ಮತ್ತೆ ಸೆಪ್ಟೆಂಬರ್ ಪ್ರಾರಂಭದಿಂದಲೇ ಮಳೆರಾಯನ ಅಬ್ಬರ ಜೋರಾಗಿತ್ತು, ಇದೀಗ ಎರಡು ದಿನಗಳ ಭಾರೀ ಮಳೆಯ ನಿರೀಕ್ಷೆ ಇದ್ದು, ನಂತರ ಮುಂಗಾರು ಅಂತ್ಯವಾಗಲಿದೆ ಎಂದು ಹೇಳಲಾಗುತ್ತಿದೆ.

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications