ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಯಿಂದಾಗಿ ಭಟ್ಕಳದಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿತಗೊಂಡಿದ್ದು, ಮನೆಯಲ್ಲಿ ಸಿಲುಕಿಕೊಂಡಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಅವರಲ್ಲಿ ಇದೀಗ ಮೂವರ ಶವ ಹೊರ ತೆಗೆಯಲಾಗಿದೆ.
ಹೌದು, ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಕೆಲ ಪ್ರದೇಶಗಳು ಸಂಪೂರ್ಣ ಮುಳುಗಡೆಯಾಗಿದ್ದು, ಹಲವೆಡೆ ಗುಡ್ಡ ಕುಸಿತಗೊಂಡಿದೆ. ಜಿಲ್ಲೆಯ ಭಟ್ಕಳ ತಾಲೂಕಿನ ಗ್ರಾಮದಲ್ಲಿ ಲಕ್ಷ್ಮಿ ನಾಯ್ಕ್ ಅವರ ಮನೆಯ ಮೇಲೆ ಗುಡ್ಡ ಕುಸಿತಗೊಂಡಿದ್ದು, ಮನೆಯೊಳಗೆ ನಾಲ್ವರು ಸಿಲುಕಿಕೊಂಡಿದ್ದರು. ಇದೀಗ ಮೂವರ ಶವವನ್ನು ರಕ್ಷಣಾ ಸಿಬ್ಬಂದಿ ಹೊರ ತೆಗೆದಿದ್ದು, ಮತ್ತೊಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇದನ್ನೂ ಓದಿ: Commonwealth Games: ಪದಕಗೆಲ್ಲೋ ತವಕದಲ್ಲಿದ್ದ ಭಾರತದ ಮೀನಾಕ್ಷಿಗೆ ಅಪಘಾತ – ಆಂಗ್ಲರ ಪಾಲಾದ ಚಿನ್ನ
ಗುಡ್ಡ ಕುಸಿತದಿಂದಾಗಿ ಮೃತಪಟ್ಟ ಲಕ್ಷ್ಮೀ ನಾರಾಯಯಣ ನಾಯ್ಕ (48), ಅವರ ಪುತ್ರಿ ಲಕ್ಷ್ಮೀ ನಾಯ್ಕ (33) ಹಾಗೂ ಸಹೋದರಿಯ ಮಗ ಪ್ರವೀಣ್ ನಾಯ್ಕ (20) ಅವರ ಮೃತ ದೇಹವನ್ನು ಹೊರಗೆ ತೆಗೆಯಾಲಿದ್ದು, ಪುತ್ರ ಅನಂತ ನಾಯ್ಕ (32) ಶವಕ್ಕಾಗಿ ಶೋಧಕಾರ್ಯ ನಡೆಸಲಾಗುತ್ತಿದೆ. ಅಲ್ಲದೇ ಘಟನಾ ಸ್ಥಳಕ್ಕೆ ಶಾಸಕ ಸುನೀಲ್ ನಾಯ್ಕ್ ಮತ್ತು ಜಿಲ್ಲಾಧಿಕಾರಿ ಮುಲ್ಲೇ ಮುಹಿಲನ್ ಭೇಟಿ ನೀಡಿದ್ದು, ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಫಾಝಿಲ್ ಕೊಲೆ ಪ್ರಕರಣ- 3 ದಿನಕ್ಕೆ 15 ಸಾವಿರ ಬಾಡಿಗೆಗೆ ಕಾರು ಖರೀದಿಸಿದ್ದ ಗ್ಯಾಂಗ್: ಎನ್. ಶಶಿಕುಮಾರ್ ಸುದ್ದಿಗೋಷ್ಠಿ