ಮಡಿಕೇರಿ: ಕೊಡಗು ಜಿಲ್ಲೆಯ (Kodagu) ಮಡಿಕೇರಿ (Madikeri Rain) ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ಸಂಜೆ 7 ಗಂಟೆಯಿಂದ ಧಾರಾಕಾರ ಮಳೆ (Heavy Rain) ಸುರಿಯುತ್ತಿದೆ. ಕಳೆದ ಮೂರು ಗಂಟೆಗಳಿಗೂ ಹೆಚ್ಚು ಕಾಲ ಬಿಟ್ಟುಬಿಡದೆ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಡಿಕೇರಿ ನಗರ ಸೇರಿದಂತೆ ಸೋಮವಾರಪೇಟೆ, ವಿರಾಜಪೇಟೆ ಮತ್ತು ಮೂರ್ನಾಡು ಭಾಗಗಳಲ್ಲೂ ಉತ್ತಮ ಮಳೆಯಾಗಿದೆ. ನಿರಂತರ ಮಳೆಯಿಂದ ರಸ್ತೆಗಳು ಕೆರೆಯಂತಾಗಿವೆ.ಇದನ್ನೂ ಓದಿ: ಸಿದ್ದರಾಮಯ್ಯ ಕನಸಿನ ಕೂಸು ಜಾತಿಗಣತಿ ಜಾರಿ ಮಾಡುತ್ತೇವೆ: ಯತೀಂದ್ರ
ಧಾರಾಕಾರ ಮಳೆಯಿಂದ ಹಳ್ಳ-ಕೊಳ್ಳಗಳು ಆತುಂಬಿ ಹರಿಯಲಾರಂಭಿಸಿವೆ. ಹಲವು ಕಡೆ ನೀರಿನ ಮಟ್ಟ ಏರಿಕೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಹವಾಮಾನದಲ್ಲಿ ಏಕಾಏಕಿ ಬದಲಾವಣೆಯಾಗಿದ್ದು, ಮಳೆ ಇನ್ನೂ ಮುಂದುವರಿಯುತ್ತಿದೆ. ಮಳೆ ಮುಂದುವರಿದರೆ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.ಇದನ್ನೂ ಓದಿ: ಬ್ರೇಕ್ ಫೇಲ್ ಆಗಿ ಮರಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್; 20ಕ್ಕೂ ಹೆಚ್ಚು ಮಂದಿಗೆ ಗಾಯ
