ಬೆಂಗಳೂರು: ರಾಜ್ಯದಲ್ಲಿ ಮಳೆಯಬ್ಬರ ಇನ್ನೂ ಕಮ್ಮಿ ಆಗಿಲ್ಲ. ಮುಂದಿನ ಮೂರು ದಿನಗಳ ಕಾಲಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಅದರಲ್ಲೂ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 115 ರಿಂದ 204 ಮಿಲಿಮೀಟರ್ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಆರೆಂಜ್ ಎಚ್ಚರಿಕೆ ನೀಡಲಾಗಿದೆ.
ಈ ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ 65 ರಿಂದ 114 ಮಿ.ಮೀಟರ್ ಮಳೆ ಆಗುವ ನಿರೀಕ್ಷೆ ಇದೆ. ಇಂದಿನಿಂದ ಮುಂದಿನ ಅಕ್ಟೋಬರ್ 23ರ ಬುಧವಾರದವರೆಗೆ ಮುನ್ನೆಚ್ಚರಿಕೆ ಜಾರಿಯಲ್ಲಿರಲಿದೆ. ರಾತ್ರಿಯಿಡೀ ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ ಸುರಿದಿದೆ.