ಬೆಂಗಳೂರು: ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗುವ (Rain) ಸಾಧ್ಯತೆಯಿದ್ದು, 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಭಾರಿ ಗಾಳಿ ಸಹಿತ ಜೋರು ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಹಲವೆಡೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ಯಶಸ್ಸಿನ ಹಿಂದೆ ಬೆಂಗಳೂರಿನ ತಂತ್ರಜ್ಞಾನವಿದೆ: ಮೋದಿ ಅಭಿನಂದನೆ
ಇನ್ನೂ ಇಂದು ಬೆಳಗ್ಗೆಯಿಂದಲೂ ಬೆಂಗಳೂರಿನ ಹಲವೆಡೆ ಜೋರು ಮಳೆಯಾಗುತ್ತಿದೆ. ಸಂಜೆ ಕೂಡ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಪ್ರತಾಪ್ ಸಿಂಹ ಮೊಬೈಲ್ SITಗೆ ಕೊಟ್ರೆ ಪ್ರಜ್ವಲ್ ರೇವಣ್ಣನಂತೆ ಜೈಲು ಶಿಕ್ಷೆ ಆಗುತ್ತೆ – ಎಂ.ಲಕ್ಷ್ಮಣ್ ಬಾಂಬ್