ಬೆಂಗಳೂರು: ಮುಂದಿನ 24 ಗಂಟೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ನೆಚ್ಚರಿಕೆ ನೀಡಿದೆ.
Advertisement
ಮುಂದಿನ 24 ಗಂಟೆಗಳು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳು ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಮಹಿಳಾ ತಹಶೀಲ್ದಾರ್‌ಗೆ ಎಷ್ಟು ಮದುವೆ ಆಗಿದೆ?- RTI ಮಾಹಿತಿ ಕೇಳಿದ ಕಾರ್ಯಕರ್ತ ಅರೆಸ್ಟ್
Advertisement
Advertisement
ಮುಂದಿನ 48 ಗಂಟೆಗಳು ಕರಾವಳಿ ಹಾಗೂ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆ ಬೆಂಗಳೂರು (Bengaluru) ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಇನ್ನೆರಡು ದಿನ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ. ಇದನ್ನೂ ಓದಿ: ರಾಜ್ಯದಲ್ಲಿ ಶುರುವಾಯ್ತು ಮತ್ತೊಂದು ಧರ್ಮ ದಂಗಲ್ – ಮದರಸಾ ಬ್ಯಾನ್‍ಗೆ ಹಿಂದೂ ಸಂಘಟನೆಗಳಿಂದ ಒತ್ತಾಯ