ಮಡಿಕೇರಿ: ಈ ವರ್ಷ ವಾಡಿಕೆಗಿಂತ ಮೊದಲೇ ರಾಜ್ಯಕ್ಕೆ ಮಾನ್ಸೂನ್ ಲಗ್ಗೆ ಇಟ್ಟಿದೆ. ಮುಂಗಾರು ಅಬ್ಬರಕ್ಕೆ ಕರಾವಳಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸಾಲುಸಾಲು ಅವಾಂತರ ಸೃಷ್ಟಿಯಾಗಿದೆ. ಕೊಡಗು (Kodagu) ಜಿಲ್ಲೆಯಲ್ಲಿ ಗಾಳಿ-ಮಳೆಯ ಆರ್ಭಟ ಜೋರಾಗಿದ್ದು, ಇಂದು ಮತ್ತು ನಾಳೆ ರೆಡ್ ಅಲರ್ಟ್ (Red Alert) ಘೋಷಣೆ ಮಾಡಲಾಗಿದೆ. ಇಂದೂ ಸಹ ಭಾರೀ ಮಳೆಯಾಗುತ್ತಿದ್ದು (Heavy Rain), ಮಡಿಕೇರಿ ನಗರದ ಮುಳಿಯ ಲೇಔಟ್‌ನಲ್ಲಿ ಜಲಾವೃತಗೊಂಡಿದ್ದು, ಜನ ಹೈರಾಣಾಗಿದ್ದಾರೆ. ಈ ಕುರಿತಂತೆ ಇನ್ನಷ್ಟು ಮಾಹಿತಿ ತಿಳಿಯಬೇಕಿದ್ದರೆ ಮುಂದೆ ವಿಡಿಯೋ ನೋಡಿ…