ಉಡುಪಿ/ಮಂಗಳೂರು: ಕಳೆದ ಹದಿನೈದು ದಿನಗಳಲ್ಲಿ ಸುರಿದ ಮಳೆ ಸೃಷ್ಟಿಸಿದ ಅವಾಂತರ ಅಷ್ಟಿಷ್ಟಲ್ಲ. ಹೀಗಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮತ್ತೆರಡು ದಿನ ರೆಡ್ ಅಲರ್ಟ್ ಇದ್ದು ಜನರಲ್ಲಿ ಆತಂಕ ಶುರು ಮಾಡಿದೆ. ಈ 2 ಜಿಲ್ಲೆಯಲ್ಲಿ ಮುಂಗಾರು ಮಳೆ ಸದ್ಯಕ್ಕೆ ಬ್ರೇಕ್ ಕೊಡುವ ಲಕ್ಷಣ ಕಾಣಿಸ್ತಿಲ್ಲ. ಹಳೆಯ ಎಲ್ಲಾ ದಾಖಲೆಗಳನ್ನು ಮೀರಿ ವರುಣದೇವ ಮುನ್ನುಗ್ಗುತ್ತಿದ್ದಾನೆ.
Advertisement
ಉಡುಪಿ ಜಿಲ್ಲೆಯಲ್ಲಿ ಜುಲೈ 1ರಿಂದ ಇದುವರೆಗಿನ ವಾಡಿಕೆಯಂತೆ 367 ಮಿಲಿ ಮೀಟರ್ ಮಳೆ ಆಗ್ಬೇಕಿತ್ತು. ಇದುವರೆಗೆ 832 ಮಿಲಿ ಮೀಟರ್ ಮಳೆಯಾಗಿದ್ದು, 250 ಹೆಕ್ಟೇರ್ ಭತ್ತ ಬೆಳೆ ಹಾನಿಯಾಗಿದೆ. ರಸ್ತೆ, ಸೇತುವೆ, ಮನೆಗಳಿಗೆ ಹಾನಿಯಾಗಿ ಅಂದಾಜು 25 ಕೋಟಿಯಷ್ಟು ನಷ್ಟವಾಗಿದೆ.
Advertisement
Advertisement
ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ನೆರೆಪೀಡಿತ ಪ್ರದೇಶಗಳಿಗೆ ತೆರಳಿ ಸ್ವಂತ ಹಣದಲ್ಲಿ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನ ಪೂರೈಸಿದ್ದಾರೆ. ಡಿಸಿ ಕೂರ್ಮರಾವ್ ಸಿಇಒ, ಎಸಿ, ತಹಶೀಲ್ದಾರ್ ಬೈಂದೂರು, ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಕುದ್ರು ಬೆಟ್ಟು ಮತ್ತು ಹೆರಾಯಿಬೆಟ್ಟಿನ ನೆರೆ ಪ್ರದೇಶಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದ್ರು. ಜನರಿಗೆ ಧೈರ್ಯ ತುಂಬಿದ್ದಾರೆ.
Advertisement
ಜಿಲ್ಲೆಯಲ್ಲಿ ಒಟ್ಟು 19 ಮನೆಗಳಿಗೆ ಗಾಳಿ ಮಳೆಯಿಂದ ಹಾನಿಯಾಗಿದ್ದು, ಬೈಂದೂರು ತಾಲೂಕಿನ ನಾವುಂದ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಹಾರಿ ಹೋಗಿ 2.50 ಲಕ್ಷ ರೂ. ನಷ್ಟ ಉಂಟಾಗಿದೆ. ಜಿಲ್ಲೆಯಲ್ಲಿ ಸರಾಸರಿ 90 ಮಿಲಿಮೀಟರ್ ಮಳೆ ಸುರಿದಿದ್ದು, ಉಡುಪಿ ನಗರ ಭಾಗದ ತಗ್ಗುಪ್ರದೇಶಗಳು ಜಲಾವೃತವಾಗಿವೆ. ಇನ್ನು ಜಿಲ್ಲೆಯಲ್ಲಿ ಅಂಗನವಾಡಿ ಮಕ್ಕಳು ಸೇರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಉಳಿದಂತೆ ಪಿಯುಸಿ, ಪದವಿ ಮತ್ತು ಇತರ ಕಾಲೇಜುಗಳಿಗೆ ಎಂದಿನಂತೆ ತರಗತಿ ನಡೆಯಲಿವೆ.
ಕುಂದಾಪುರ ತಾಲೂಕಿನ ತೆಕ್ಕಟ್ಟೆ ಭಾಗದ ಕುದ್ರುವಿನ ಜನ ತಮ್ಮ ಜಾನುವಾರುಗಳನ್ನು ಎತ್ತರ ಪ್ರದೇಶಕ್ಕೆ ಶಿಫ್ಟ್ ಮಾಡಿದ್ದಾರೆ. ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳು ರೆಡ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕಿಳಿಯದಂತೆ, ನದಿಪಾತ್ರದ ಜನರು ಮುಂಜಾಗೃತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಒಟ್ಟಾಗಿ ಸ್ಪರ್ಧೆ: ಶರದ್ ಪವಾರ್
ಇತ್ತ ದಕ್ಷಿಣ ಕನ್ನಡದಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ, ಮನೆ ಕುಸಿತ, ಪ್ರವಾಹ ಸೇರಿದಂತೆ ಅನಾಹುತಗಳು ನಡೆಯುತ್ತಲೇ ಇದೆ. ಕರಾವಳಿಯಲ್ಲಿ ಈ ಬಾರಿ ಮಳೆಯೇ ಇಲ್ಲ ಎಂದು ಜನ ಜೂನ್ ತಿಂಗಳಿನಲ್ಲಿ ಆತಂಕದಿಂದಿದ್ದರು. ಆದರೆ ಜುಲೈ ಆರಂಭದಲ್ಲೇ ಸುರಿದ ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಜನ ಅಕ್ಷರಶಃ ತತ್ತರಿಸಿಸುತ್ತಿದ್ದಾರೆ. ಒಂದ್ಕಡೆ ಬಿಟ್ಟುಬಿಡದ ಮಳೆ, ಇನ್ನೊಂದ್ಕಡೆ ಸಾಲು ಸಾಲು ಅವಾಂತರ. ಜಿಲ್ಲೆಯಲ್ಲಿ ಇಂದೂ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಾಳೆಯಾಗುವ ಸಾಧ್ಯತೆ ಇದೆ, ಈ ಹಿನ್ನೆಲೆ ಅಂಗನವಾಡಿಯಿಂದ ಪ್ರೌಢ ಶಾಲೆಯವರೆಗಿನ ಮಕ್ಕಳಿಗೆ ರಜೆ ನೀಡಲಾಗಿದೆ.
ಜುಲೈ 6ರಂದು ಕುಸಿದಿದ್ದ ಪಂಜಿಕಲ್ಲು ಗಡ್ಡದ ಮತ್ತೊಂದು ಭಾಗವೂ ಕುಸಿದಿದೆ. ಮನೆ ಮೇಲೆ ಬಿದ್ದಿದ್ದರಿಂದ ಮನೆಯವನ್ನು ಸ್ಥಳಾಂತರ ಮಾಡಿದ್ದಕ್ಕೆ ಅನಾಹುತ ತಪ್ಪಿದೆ. ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಜಿಲ್ಲಾದ್ಯಂತ ಮನೆಗಳು ಕುಸಿದಿದ್ದು, ಸಾಕಷ್ಟು ಹಾನಿಯಾಗಿದೆ. ಒಂದು ವಾರದಿಂದ ಇಂದಿನವರೆಗೆ ಒಟ್ಟು 56 ಮನೆಗಳು ಸಂಪೂರ್ಣ ಕುಸಿದಿದ್ದು, 82 ಮನೆಗಳು ಭಾಗಶಃ ಕುಸಿದಿದೆ. 11 ಗ್ರಾಮಗಳು ಭಾಗಶಃ ಮುಳುಗಡೆಯಾಗಿದೆ. ಮನೆ ಕುಸಿತ ಆಗಿರುವ ಎಲ್ಲಾ ಕಡೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಜನರನ್ನು ಸ್ಥಳಾಂತರ ಮಾಡಿರೋದ್ರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸ್ಥಳಾಂತರ ಮಾಡಿರೋ ಎಲ್ಲರಿಗೂ ಜಿಲ್ಲಾಡಳಿತ ಸದ್ಯದ ಮಟ್ಟಿಗೆ ಬದಲಿ ಆಶ್ರಯ ಕಲ್ಪಿಸಿದೆ.
ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಮಧ್ಯರಾತ್ರಿ 12 ಗಂಟೆಗೆ ಸುಮಾರಿಗೆ ಉಕ್ಕಿ ಹರಿಯುವ ಹೊಳೆಗೆ ಕಾರೊಂದು ಹಾರಿ ಬಿದ್ದಿದೆ. ಒಟ್ಟಿನಲ್ಲಿ ಜಿಲ್ಲಾದ್ಯಂತ ಮಳೆ ಮುಂದುವರಿದಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಹೀಗಾಗಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಯಾಗಿದು,್ದ ಕೆಲವೆಡೆ ಈಗಾಗಲೇ ಪ್ರವಾಹದ ನೀರು ನುಗ್ಗಿದೆ. ಇನ್ನೂ ಎರಡು ದಿನಗಳ ಕಾಲ ರೆಡ್ ಅಲರ್ಟ್ ಇದ್ದು ಭಾರೀ ಮಳೆಯಾಗುವ ಸಾಧ್ಯತೆ ಇದೆ.