ಮಂಡ್ಯ: ಬೆಂಗಳೂರಿಗೆ ಕಾವೇರಿ ನೀರು ಪೂರೈಕೆ ಮಾಡುವ ತೊರೆಕಾಡನಹಳ್ಳಿ (ಟಿಕೆ ಹಳ್ಳಿ) ಪಂಪ್ ಸ್ಟೇಷನ್ ಮುಳುಗಡೆಯಾಗಿದೆ.
ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಪಂಪಿಂಗ್ ಸ್ಟೇಷನ್ ಮುಳುಗಡೆಯಾಗಿದ್ದು, ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ತೊರೆ ಕಾಡನಹಳ್ಳಿ ಪಂಪ್ ಸ್ಟೇಷನ್ಗೆ ನೀರು ನುಗ್ಗಿದೆ, ಯಂತ್ರೋಪಕರಣಗಳು ಸ್ಥಗಿತವಾಗಿದೆ. ಈಗಾಗಲೇ ನಾನು ಬಿಡಬ್ಲ್ಯೂಎಸ್ ಎಸ್ ಬಿ ಅಧ್ಯಕ್ಷರ ಜೊತೆ ಮಾತನಾಡಿದ್ದು ಸ್ಥಳಕ್ಕೆ ತೆರಳಿದ್ದಾರೆ ಎಂದರು.
ನಾನು ಮಧ್ಯಾಹ್ನ ಹೋಗಿ ಪರಿಶೀಲನೆ ಮಾಡುತ್ತೇನೆ. ಸಂಜೆಯೊಳಗೆ ಯಂತ್ರೋಪಕರಣಗಳು ಮತ್ತೆ ಚಾಲನೆಯಾಗಲಿದೆ. ತೊರೆ ಕಾಡನಹಳ್ಳಿ ಪರಿಶೀಲನೆ ಮಾಡಿದ ಬಳಿಕ ಹೆಚ್ಚಿನ ಮಾಹಿತಿ ಹೇಳುತ್ತೇನೆ ಎಂದು ಸಿಎಂ ಹೇಳಿದರು. ಇದನ್ನೂ ಓದಿ: ಮಹಾಮಳೆಗೆ ನಲುಗಿದ ರಾಜ್ಯ ರಾಜಧಾನಿ- 100ಕ್ಕೂ ಹೆಚ್ಚು ಮನೆಗೆ ನುಗ್ಗಿದ ನೀರು, ಕೆರೆಯಂತಾದ ರಸ್ತೆಗಳು