ಬೆಂಗಳೂರು: ಬಿಪರ್‌ಜಾಯ್ ಚಂಡಮಾರುತದ ಪರಿಣಾಮವಾಗಿ ರಾಜ್ಯದಲ್ಲಿ (Karnataka) ದುರ್ಬಲಗೊಂಡಿದ್ದ ಮುಂಗಾರು ಸೋಮವಾರದಿಂದ ಚುರುಕುಗೊಳ್ಳುವ ಸಾಧ್ಯತೆ ಇದೆ. ಭಾನುವಾರ ಬೆಳಗ್ಗೆಯಿಂದಲೇ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿದೆ. ಕರಾವಳಿ ಸೇರಿ ರಾಜ್ಯದ ವಿವಿಧೆಡೆ ವರ್ಷಧಾರೆಯಾಗಿದ್ದು, ಇದರಿಂದಾಗಿ ಮುಂಗಾರು ಚುರುಕುಗೊಳ್ಳುವ ಲಕ್ಷಣ ಗೋಚರಿಸಿದೆ.
ಮುಂದಿನ 48 ಗಂಟೆಗಳ ಕಾಲ ಕರಾವಳಿಯ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಬಾವಿಗಿಳಿದು ಬೆಕ್ಕನ್ನು ರಕ್ಷಣೆ ಮಾಡಿದ ಪೇಜಾವರ ಶ್ರೀ
Advertisement
Advertisement
ಮುಂದಿನ 2 ದಿನ ಒಳನಾಡಿನ ಒಂದೆರಡು ಕಡೆ, ಕರಾವಳಿಯಯಲ್ಲಿ ಗುಡುಗು ಮಿಂಚಿನ ಸಹಿತ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ ಇರುವ ಸಾಧ್ಯತೆ ಇದೆ ಎಂದು ಹೇಳಿದೆ.
Advertisement
ಗರಿಷ್ಠ ಉಷ್ಣಾಂಶವು ರಾಜ್ಯದ ಒಂದೆರಡು ಕಡೆಗಳಲ್ಲಿ 4-5 ಹಾಗೂ ಕೆಲವು ಕಡೆಗಳಲ್ಲಿ 3-4 ಡಿಗ್ರಿ ಸೆಲ್ಸಿಯಸ್ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ.
Advertisement
ಮೀನುಗಾರರಿಗೆ ಎಚ್ಚರಿಕೆ:
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ನಿಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿದೆ ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ.
ನಿನ್ನೆ ಸುರಿದ ಮಳೆಯ ವಿವರ:
ಶನಿವಾರ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣದ ಸುತ್ತ ಮುತ್ತ ಅತಿ ಹೆಚ್ಚು 12 ಸೆಂ.ಮೀ. ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರಿನಲ್ಲಿ 10 ಸೆಂ.ಮೀ ಮುಲ್ಕಿ, ಉಪ್ಪಿನಂಗಡಿಯಲ್ಲಿ 6 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ 6 ಸೆಂ.ಮೀ, ಹೊನ್ನಾವರ , ಕುಮಟ, ಕಾರವಾರ, ಕದ್ರಾ ದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದೆ.
ಇನ್ನೂ ಮಾಣಿ, ಕ್ಯಾಸಲ್ ರಾಕ್, ಶಿರಾಳಿ, ಗೋಕರ್ಣ, ಕೋಟ, ಸುಳ್ಯ, ಸಿಂಧನರಿನಲ್ಲಿ 3 ಸೆಂ.ಮೀ ; ಗೇರುಸೊಪ್ಪ, ಬೆಳ್ತಂಗಡಿ, ಕೊಲ್ಲೂರು, ಭಾಗಮಂಡಲದಲ್ಲಿ 2 ಮತ್ತು ಉಡುಪಿ, ಕುಂದಾಪುರ, ಕಾರ್ಕಳ, ಸಿದ್ದಾಪುರ, ಅಂಕೋಲಾ, ಧರ್ಮಸ್ಥಳ, ಪುತ್ತೂರಿನಲ್ಲಿ 1 ಸೆಂ.ಮೀ ಮಳೆಯಾಗಿದೆ.
ಸಿಲಿಕಾನ್ ಸಿಟಿಯಲ್ಲಿ ಮಳೆ:
ಬೆಂಗಳೂರು (Bengaluru) ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಇಲ್ಲವೇ ರಾತ್ರಿಯ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸಲಿದ್ದು, ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮಳೆ ಕುಂಠಿತ:
ಆರಂಭದಲ್ಲಿ ಮಾನ್ಸೂನ್ ದುರ್ಬಲಗೊಂಡ ಪರಿಣಾಮ ಪ್ರಸಕ್ತ ತಿಂಗಳಲ್ಲಿ ಮಳೆ ಕೊರತೆಯಾಗಿದೆ. ಜೂ. 1ರಿಂದ ಜೂ 18ರವರೆಗೆ ರಾಜ್ಯಾದ್ಯಂತ ವಾಡಿಕೆಯಂತೆ 109 ಮಿಮೀ ಮಳೆ ಆಗಬೇಕಿತ್ತು. ಆದರೆ, 32 ಮಿಮೀ ಮಳೆಯಾಗಿದ್ದು, ಶೇ.71 ಕಡಿಮೆ ಪ್ರಮಾಣದಲ್ಲಿ ಮಳೆ ಬಿದ್ದಿದೆ. ಇದನ್ನೂ ಓದಿ: ಬಿಜೆಪಿಯ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ನೆರವಿಗಾಗಿಯೇ ಕಾಂಗ್ರೆಸ್ ಗ್ಯಾರಂಟಿಗಳನ್ನ ತಂದಿದೆ: ದಿನೇಶ್ ಗುಂಡೂರಾವ್