ಬೆಂಗಳೂರು: ಮುಂದಿನ ಮೂರ್ನಾಲ್ಕು ದಿನ ರಾಜ್ಯಾದ್ಯಂತ ಭಾರೀ ಮಳೆ ಸುರಿಯುವ ಸಂಭವ ಇದ್ದು ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಕ್ಕೆ 4 ದಿನ ಯೆಲ್ಲೋ ಅಲರ್ಟ್ ಜಾರಿಯಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮಂಡ್ಯ, ದಾವಣಗೆರೆ, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಇದನ್ನೂ ಓದಿ: ಗಗನಕ್ಕೆ ಏರಿದ ತರಕಾರಿ ಬೆಲೆ- 1ಕೆ.ಜಿ ಟೊಮೆಟೊಗೆ 500ರೂ, ನಿಂಬೆಹಣ್ಣಿಗೆ ಕೆ.ಜಿಗೆ 400 ರೂ.
ಬೆಳಗಾವಿ, ಗದಗ, ಧಾರವಾಡ, ಹಾವೇರಿಗೆ ಇಂದು ಯೆಲ್ಲೋ ಅಲರ್ಟ್ ಜಾರಿಯಾಗಿದ್ದರೆ ನಾಳೆ ಧಾರವಾಡ, ಗದಗ, ಹಾವೇರಿ, ಕಲಬುರಗಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ.
ಬುಧವಾರ ಬೆಳಗಾವಿ, ಧಾರವಾಡ, ಹಾವೇರಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.