ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮುಂದಿನ 3 ಗಂಟೆ ಭಾರೀ ಮಳೆಯಾಗುವ (Heavy Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರಿನಲ್ಲಿ ಈಗಾಗಲೇ ತುಂತುರು ಮಳೆ ಆರಂಭಗೊಂಡಿದ್ದು, ಮುಂದಿನ 3 ಗಂಟೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಳೆ ಹಿನ್ನೆಲೆ ಬೆಂಗಳೂರಿಗೆ 2 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಪಂಜಾಬ್ ಸಚಿವ ಸಂಜೀವ್ ಅರೋರಾ ಬಂಧಿಸಿದ ಇ.ಡಿ
ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರಕ್ಕೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಗಂಟೆಗೆ 30-40 ಕಿಲೋ ಮೀಟರ್‌ವರೆಗೆ ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಸದ್ಯ ಟೌನ್ ಹಾಲ್, ಕಾರ್ಪೋರೇಷನ್, ಆನಂದರಾವ್ ಸರ್ಕಲ್ ಸುತ್ತಮುತ್ತ ಮಳೆ ಆರಂಭವಾಗಿದೆ. ಇದನ್ನೂ ಓದಿ: ಲಾರಿಗೆ ಕಾರು ಡಿಕ್ಕಿ – ದೇವರ ದರ್ಶನ ಪಡೆದು ಬರುತ್ತಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ

