ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆಯ ಕಬಿನಿ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಬಿಡುತ್ತಿರುವ ಪರಿಣಾಮ ಕಪಿಲಾ ನದಿ ತುಂಬಿ ಹರಿಯುತ್ತಿದ್ದು ಪ್ರವಾಹ ಭೀತಿ ಸೃಷ್ಟಿಯಾಗಿದೆ.
ಭಾರೀ ಮಳೆಗೆ ನಂಜನಗೂಡಿನ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಹದಿನಾರು ಕಾಲು ಮಂಟಪ ಬಹುತೇಕ ಮುಳುಗಡೆಯಾಗಿದೆ. ಹೀಗಾಗಿ ಭಕ್ತರಿಗೆ ಸ್ನಾನಘಟ್ಟದಲ್ಲಿ ಸ್ನಾನಕ್ಕೆ ನಿರ್ಬಂಧ ಹೇರಲಾಗಿದೆ. ಇನ್ನೂ ಎರಡು ದಿನ ಇದೇ ಪ್ರಮಾಣದಲ್ಲಿ ನೀರಿನ ಹೊರ ಹರಿವು ಇದ್ದರೆ, ನಂಜನಗೂಡಿನ ಬಹುತೇಕ ತಗ್ಗು ಪ್ರದೇಶಗಳ ಮನೆಗಳು ಮುಳುಗಡೆಯಾಗುವುದು ನಿಶ್ಚಿತವಾಗಿದೆ. ಇದನ್ನೂ ಓದಿ: ಇಂದಿನಿಂದ ಆಗುಂಬೆ ಘಾಟಿ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ
Advertisement
Advertisement
ಪರಶುರಾಮ ದೇವಸ್ಥಾನ ಮುಳುಗಡೆ: ಕಬಿನಿ ಜಲಾಶಯದಿಂದ ಹೆಚ್ಚಿನ ನೀರು ಹೊರ ಬಿಡುತ್ತಿರುವ ಕಾರಣ ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ. ನಂಜನಗೂಡು ಪಟ್ಟಣದ ಹೊರ ವಲಯದಲ್ಲಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ. ಪರಶುರಾಮ ದೇವರಿಗೆ ಜಲದಿಗ್ಭಂಧನ ಸೃಷ್ಟಿಯಾಗಿದ್ದು, ನೀರಿನ ಪ್ರಮಾಣ ತಗ್ಗುವವರೆಗೂ ದೇವರಿಗೆ ಪೂಜೆ ಇಲ್ಲ. ಇದನ್ನೂ ಓದಿ: ಗೊಟಬಯ ರಾಜಪಕ್ಸೆ ಇನ್ನೂ ದೇಶದಲ್ಲಿಯೇ ಇದ್ದಾರೆ: ಮಹಿಂದಾ ಯಾಪಾ ಅಬೇವರ್ಧನ