ಹಾಸನ | ಬಿರುಗಾಳಿ ಸಹಿತ ಧಾರಾಕಾರ ಮಳೆ – ರೈತರ ಮೊಗದಲ್ಲಿ ಮಂದಹಾಸ

Public TV
1 Min Read
heavy Rain in haasan

– ಧಾರವಾಡದಲ್ಲಿಯೂ ಭಾರಿ ಮಳೆ

ಹಾಸನ: ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ ಇದೀಗ ಮತ್ತೆ ಅಬ್ಬರಿಸುತ್ತಿದ್ದು, ಜಿಲ್ಲೆಯ ಕೆಲವು ಕಡೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಆದರೆ ವಿವಿಧ ಬೆಳೆಗಳ ಬಿತ್ತನೆ ಮಾಡಿರುವ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.ಇದನ್ನೂ ಓದಿ: ನಮಗೆ ಪರಿಹಾರ ಬೇಡ, ಮಗಳನ್ನು ತಂದುಕೊಡಿ: ಚೆಕ್ ಕೊಡಲು ಬಂದ ಡಿಸಿ ಮುಂದೆ ಸಹನಾ ಪೋಷಕರ ಕಣ್ಣೀರು

ಕೆಲವು ಕಡೆಗಳಲ್ಲಿ ಭಾರೀ ಮಳೆಯಿಂದಾಗಿ ಮನೆ, ಗುಡಿಸಲುಗಳಿಗೆ ನೀರು ನುಗ್ಗಿದೆ. ಜೊತೆಗೆ ರಸ್ತೆ, ಹೊಲ, ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದೆ. ಬೇಲೂರಿನ ಹಳೇಬೀಡು ಗ್ರಾಮದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದು, ರಸ್ತೆಗಳು ಕೆರೆಯಂತಾಗಿವೆ. ಹೀಗಾಗಿ ವಾಹನ ಸವಾರರು ಪರದಾಡುವಂತಾಗಿದೆ. ಹಳೇಬೀಡು ಸುತ್ತಮುತ್ತಲಿನ ಕೆರೆಗಳು ಒತ್ತುವರಿಯಾಗಿರುವುದರಿಂದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ.

ಧಾರವಾಡ (Dharwad) ನಗರ ಸೇರಿದಂತೆ ಹಲವೆಡೆ ಭಾನುವಾರ ಮಧ್ಯಾಹ್ನ ಭಾರೀ ಮಳೆಯಾಗಿದ್ದು, ಅನೇಕ ರಸ್ತೆಗಳು ಜಲಾವೃತಗೊಂಡಿವೆ. ಜೊತೆಗೆ ಕೆಲವು ಮನೆಗಳಿಗೆ ನೀರು ನುಗ್ಗಿ, ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೂ ಜಿಲ್ಲೆಯಲ್ಲಿರುವ ಕೆಎಂಎಫ್ ಮುಂಭಾಗದ ಬಿಆರ್‌ಟಿಎಸ್ ಕಾರಿಡಾರ್ ಸಂಪೂರ್ಣ ಜಲಾವೃತಗೊಂಡು ಸಂಚಾರ ದಟ್ಟಣೆ ಉಂಟಾಗಿತ್ತು.ಇದನ್ನೂ ಓದಿ: ಕಾಲ್ತುಳಿತ ಕೇಸಲ್ಲಿ ಗೋವಿಂದರಾಜು ಬಂಧಿಸಬೇಕು, ಸಿಎಂ & ಡಿಸಿಎಂ ರಾಜೀನಾಮೆ ಕೊಡ್ಬೇಕು: ಯತ್ನಾಳ್‌ ಆಗ್ರಹ

Share This Article