ಬೆಂಗಳೂರು: ಮುಂಗಾರು ರಾಜ್ಯಕ್ಕೆ ಎಂಟ್ರಿ ಕೊಟ್ಟು 10 ದಿನ ಕಳೆದಿದೆ. ಇಷ್ಟು ದಿನ ರಾಜ್ಯದಲ್ಲಿ ಚದುರಿದಂತೆ ಮಳೆ ಆಗುತ್ತಿತ್ತು. ಆದರೆ ಇಂದಿನಿಂದ ಮುಂಗಾರು ಮಳೆ ಅಬ್ಬರಿಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
Advertisement
ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಗದಗ, ಹಾವೇರಿ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಶಿವಮೊಗ್ಗದಲ್ಲಿ ಭಾರೀ ಮಳೆ ಆಗುವ ಮುನ್ಸೂಚನೆ ಇದ್ದು. ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ 3 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ನೂಪುರ್ ಶರ್ಮಾ ಪ್ರತಿಕೃತಿ ಮಾಡಿ ನೇಣು ಹಾಕಿದ ಕಿಡಿಗೇಡಿಗಳು
Advertisement
Advertisement
ಉಳಿದಂತೆ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೃಷಿ ಚಟುವಟಿಕೆಗಳು ಇನ್ಮುಂದೆ ಬಿರುಸು ಪಡೆಯುವ ಸಂಭವ ಇದೆ. ಇದನ್ನೂ ಓದಿ: ರಾಜ್ಯಸಭೆಗೆ ಆಯ್ಕೆ ಹಿನ್ನೆಲೆ ಮಂತ್ರಾಲಯ ರಾಯರ ಮಠಕ್ಕೆ ನಟ ಜಗ್ಗೇಶ್ ಭೇಟಿ