ಬೆಂಗಳೂರು: ಮುಂದಿನ ಮೂರು ಗಂಟೆಯ ಒಳಗಡೆ ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Rain) ಸಾಧ್ಯತೆಯಿದೆ.
ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಬೀದರ್, ಬಳ್ಳಾರಿ, ಮೈಸೂರು, ದಾವಣಗೆರೆ, ಬೆಂಗಳೂರು, ತುಮಕೂರು ಜಿಲ್ಲೆಯಲ್ಲಿ ಗಾಳಿ, ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ದಾಖಲೆ ಇಲ್ಲದ ಹಣವನ್ನು ಸೊಂಟಕ್ಕೆ ಕಟ್ಟಿಕೊಂಡು ಬಂದ ಖತರ್ನಾಕ್ ವ್ಯಕ್ತಿಗಳು!
Advertisement
ಈಗಾಗಲೇ ದಕ್ಷಿಣ ಕರ್ನಾಟಕದ (South Karnataka) ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಹಾಸನದಲ್ಲಿ ಮೊದಲ ಮಳೆಯಾಗಿದೆ. ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡರೆ ರೈತರ ಮೊಗದಲ್ಲಿ ಮಂದಹಾಸ ಬೀರಿದೆ.