ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಕರ್ನಾಟಕ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ನೀವೆಷ್ಟೇ ಗುಲಾಮಗಿರಿ, ಚಮಚಾಗಿರಿ ಮಾಡಿದರೂ ಏನೂ ಪ್ರಯೋಜನವಿಲ್ಲ: ಬಿಜೆಪಿ
ಕರಾವಳಿ ಭಾಗದಲ್ಲಿ ಮೇ 18 ಕ್ಕೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಕರಾವಳಿ ಭಾಗದ ಎಲ್ಲ ಜಿಲ್ಲೆಗಳಲ್ಲಿ ಈಗಾಗಲೇ ಮೇ 18 ಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ ಮತ್ತು ಮೇ 17ಕ್ಕೆ ಆರೆಂಜ್ ಅಲರ್ಟ್ ಮತ್ತು ಮೇ 19 ರಿಂದ 21 ರವರೆಗೆ ಎಲ್ಲೋ ಆಲರ್ಟ್ ಘೋಷಿಸಲಾಗಿದೆ. ಅದೇ ರೀತಿ ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ನಾಳೆಯಿಂದ 21 ರವರೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ: ಬಾಗಲಕೋಟೆ ಕೇಸ್‍ಗೆ ಟ್ವಿಸ್ಟ್ – ಮೊದಲು ಸಂಗೀತಾ ಹಲ್ಲೆ ಮಾಡಿದ್ದ ವೀಡಿಯೋ ವೈರಲ್
ಅರಬ್ಬಿ ಸಮುದ್ರದಲ್ಲಿ ತೇವಾಂಶ ತುಂಬಿದ ಗಾಳಿ ಗಂಟೆಗೆ 50-60 kmph ವೇಗದಲ್ಲಿ ಪಶ್ಚಿಮ ದಿಕ್ಕಿನಿಂದ ಬೀಸಲಿದೆ. ಲಕ್ಷದ್ವೀಪ ಭಾಗದಿಂದ ಕರಾವಳಿ ಭಾಗಕ್ಕೆ ಸರಾಸರಿ 3 km ವೇಗದಲ್ಲಿ ಮೇಲ್ಮೈ ಸುಳಿಗಾಳಿ ಬೀಸಲಿದ್ದು, ತಮಿಳುನಾಡು ಕರಾವಳಿ ಭಾಗದಿಂದ ರಾಜ್ಯ ಒಳನಾಡು ಭಾಗಕ್ಕೆ ಸರಾಸರಿ 2 km ವೇಗದಲ್ಲಿ ಮೇಲ್ಮೈ ಸುಳಿಗಾಳಿ ಬೀಸಲಿದೆ. ಉತ್ತರ ದಕ್ಷಿಣ ಟರ್ಫ್ ಸಮುದ್ರ ಭಾಗದಲ್ಲಿ ಬೀಸುತ್ತಿರುವ ಮೇಲ್ಮೈ ಸುಳಿಗಾಳಿ ಸಮುದ್ರ ಮಟ್ಟದಿಂದ 900 ಮೀ. ಎತ್ತರ ಏರಿಕೆಯಾಗಲಿದೆ ಎಂದು ಹವಾಮಾನ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ.