ಬೆಂಗಳೂರು: ಬೆಂಗಳೂರಿನಲ್ಲಿ ಬೆಳಗ್ಗೆ ಒಂದಷ್ಟು ಸಮಯ ಸೂರ್ಯ ಇಣುಕಿ ನೋಡಿದ. ಸಂಜೆ ಹೊತ್ತಿಗೆ ಮತ್ತೆ ಮಳೆ ಅಬ್ಬರಿಸಿದೆ. ಮಲ್ಲೇಶ್ವರಂ, ಬಸವನಗುಡಿ, ಕೆ.ಆರ್ ಮಾರ್ಕೆಟ್, ಕಾರ್ಪೊರೇಷನ್, ಯಶವಂತಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ.
Advertisement
ದಕ್ಷಿಣ ಒಳನಾಡು, ಕರಾವಳಿ, ಮತ್ತು ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಚಿಕ್ಕಮಗಳೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಬೆಂಗಳೂರು ನಗರದಲ್ಲಿ ಮಳೆಯ ಪರಿಣಾಮ ಎಂದಿನಂತೆ ವಾಹನ ಸವಾರರು ಪರದಾಡಿದರು. ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆ ಮೂನ್ಸೂಚನೆ
Advertisement
Advertisement
ಕೇರಳದಂತೆ ಕರ್ನಾಟಕದಲ್ಲೂ ಮುಂದಿನ 2 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಭಾರೀ ಮಳೆಗೆ ಭತ್ತದ ಗದ್ದೆಗಳಲ್ಲಿ ನೀರು ತುಂಬಿ, 20ಕ್ಕೂ ಹೆಚ್ಚು ಎಕರೆ ಪ್ರದೇಶದ ಭತ್ತದ ಫಸಲು ನಾಶವಾಗಿದೆ. ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದ ವಡ್ಗಲ್ ರಂಗನಾಥಸ್ವಾಮಿ ದೇವಾಲಯದ ಬಳಿ ಗುಡ್ಡ ಕುಸಿತವಾಗಿದೆ. ಶ್ರೀರಂಗಪಟ್ಟಣದಲ್ಲಿ ಮಳೆಯಿಂದಾಗಿ ಸೆಂದಲ್ ಕೋಟೆಯ ಗೋಡೆ ಕುಸಿತವಾಗಿದೆ. ಮೈಸೂರು, ಕೇರಳ ಗಡಿಭಾಗದಲ್ಲಿ ನಿರಂತರ ಮಳೆಯಿಂದ, ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಳ್ಳ ಕೆರೆ ಕೋಡಿ ಬಿದ್ದಿದೆ. ಕೋಡಿ ನೀರಲ್ಲಿ ಕೆರೆಯಿಂದ ಹೊರಬರುತ್ತಿರುವ ಮೀನುಗಳನ್ನು ಹಿಡಿಯಲು ಗ್ರಾಮಸ್ಥರು ಮುಗಿಬಿದ್ದಿದ್ದಾರೆ. ಇದನ್ನೂ ಓದಿ: ನೇಪಾಳದಲ್ಲಿ ಭೂಕಂಪಕ್ಕೆ ಮನೆ ಕಳೆದುಕೊಂಡವರಿಗೆ 50 ಸಾವಿರ ಮನೆ ಕಟ್ಟಿಕೊಟ್ಟ ಭಾರತ
Advertisement