ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮಂಗಳೂರು (Mangaluru) ನಗರದಲ್ಲಿ ಭಾರೀ ಮಳೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.
ನಗರದಲ್ಲಿ ಒಂದು ಗಂಟೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ನಿನ್ನೆ ಕೇರಳಂಗೆ ಮುಂಗಾರು ಮಾರುತ ಆಗಮಿಸಿದೆ. ಕೇರಳಂಗೆ ಮಳೆಗಾಲ ಆರಂಭವಾದ ಎರಡು ದಿನದಲ್ಲಿ ರಾಜ್ಯದಲ್ಲೂ ಮಳೆಯಾಗೋದು ವಾಡಿಕೆಯಾಗಿದೆ. ಇದನ್ನೂ ಓದಿ: ಕೇರಳಕ್ಕೆ ಮುಂಗಾರು ಎಂಟ್ರಿ ಬೆನ್ನಲ್ಲೇ ರಾಜ್ಯದಲ್ಲಿ ವರುಣನ ಅಬ್ಬರ – ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರಂಭ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಒಟ್ಟು 92 ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಲಾಗಿದೆ. ಬೆಳ್ತಂಗಡಿಯಲ್ಲಿ ಗರಿಷ್ಠ 32 ಹಾಗೂ ಉಳ್ಳಾಲದಲ್ಲಿ ಕನಿಷ್ಠ 3 ಸಂಭವನೀಯ ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಲಾಗಿದೆ.
88 ಕಡೆ ಸಂಭವನೀಯ ಭೂಕುಸಿತ ಪ್ರದೇಶವೆಂದು ಗುರುತಿಸಲಾಗಿದೆ. ಇದು ಕೂಡಾ ಬೆಳ್ತಂಗಡಿಯಲ್ಲಿ ಗರಿಷ್ಠ 35 ಹಾಗೂ ಪುತ್ತೂರಿನಲ್ಲಿ ಕನಿಷ್ಠ 3 ಕಡೆ ಭೂ ಕುಸಿತ ಪ್ರದೇಶಗಳನ್ನು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 115 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದ ರಿಯಾಸಿಯಲ್ಲಿ ಮೇಘ ಸ್ಫೋಟ; ಹಠಾತ್ ಜಲಪ್ರವಾಹ
