ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ದಾಂಡೇಲಿ ಮತ್ತು ಜೋಯಿಡಾ ತಾಲ್ಲೂಕುಗಳ ಅಂಗನವಾಡಿ, ಶಾಲೆಗಳಿಗೆ ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಮಾಡಿದ್ದಾರೆ.
ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ರಜೆ ಘೋಷಣೆ ಮಾಡಲಾಗಿದ್ದು, ಇಂದು ಜಿಲ್ಲೆಯಾದ್ಯಾಂತ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜಿಲ್ಲೆಯಲ್ಲಿ ಗಾಳಿ ಸಹಿತ ಹೆಚ್ಚಿನ ಮಳೆಯಾಗುತ್ತಿದ್ದು, ಇಂದು ಮಲೆನಾಡು ಭಾಗದಲ್ಲಿ ಮಳೆಯ ಜೊತೆಗೆ ಗಾಳಿಯ ರಭಸವೂ ಹೆಚ್ಚಿರಲಿದೆ. ಸಂಪ್ರದಾಯಿಕ ಮೀನುಗಾರಿಕೆಗೂ ಕೂಡ ನಿರ್ಬಂಧ ಇದ್ದು, ಜಿಲ್ಲೆಯ ಜಲಪಾತಗಳು, ಕಡಲತೀರ ಪ್ರದೇಶಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಮುಂದುವರೆಸಲಾಗಿದೆ.