ಬೆಂಗಳೂರು: ಇಂದು ಸಂಜೆ ಮತ್ತು ನಾಳೆ ಬೆಂಗಳೂರು ಸೇರಿದಂತೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಸಂಜೆಯವರೆಗೂ ಮೋಡ ಕವಿದ ವಾತಾವರಣವಿದ್ದು, ಸಂಜೆ ಮತ್ತು ರಾತ್ರಿ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ. ನಿನ್ನೆ ಘೋಷಿಸಿದ್ದ ಜಿಲ್ಲೆಗಳಲ್ಲಿ ಇಂದು ಕೂಡ ಹಳದಿ ಅಲರ್ಟ್ ಮುಂದುವರಿದಿದೆ. ಸುಮಾರು 7 ರಿಂದ 11 ಸೆಂ.ಮೀ. ಮಳೆಯಾಗುವ ಸಾಧ್ಯತೆಯಿದೆ.
Advertisement
ರಾಜ್ಯದ ಮೈಸೂರು, ರಾಮನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಂಜೆಯಿಂದ ರಾತ್ರಿಯವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಹವಾಮಾನ ತಜ್ಞ ರಾಜರಮೇಶ ತಿಳಿಸಿದ್ದಾರೆ.
Advertisement
Advertisement
ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸೋಮವಾರದಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಈ ಸೋಮವಾರ ಕೆಎಸ್‍ಎನ್‍ಡಿಎಂಸಿ ತಿಳಿಸಿತ್ತು. ಮುಂಗಾರು ಚುರುಕುಗೊಂಡಿರುವುದರಿಂದ ಹಾಗೂ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಹೆಚ್ಚು ಪ್ರಮಾಣದಲ್ಲಿ ಮಳೆಯಾಗಬಹುದು. ಸೆಪ್ಟೆಂಬರ್ 23, 24, 25 ಹಾಗೂ 26ರಂದು ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿತ್ತು.
Advertisement
ಈ ಹಿನ್ನೆಲೆ ಹವಾಮಾನ ಇಲಾಖೆಯಿಂದ ಬೆಂಗಳೂರಿಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿತ್ತು. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪ್ರಾರಂಭವಾಗಿದೆ. ಪರಿಣಾಮ 7ರಿಂದ 11 ಸೆಂ.ಮೀ ಮಳೆಯಾಗಲಿದ್ದು, ಗುಡುಗು ಸಿಡಿಲು ಸಹಿತ ವರುಣ ಅಬ್ಬರಿಸಲಿದ್ದಾನೆ.