ಬೆಂಗಳೂರು: ರಾಜ್ಯದಲ್ಲಿ (Karnataka) ಇಂದಿನಿಂದ ಮೂರು ದಿನ ಮಳೆಯಾಗಲಿದೆ. ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಜೋರು ಮಳೆ (Heavy Rain) ಸುರಿಯುವ ಸಾಧ್ಯತೆಯಿದೆ.
ಇಂದು ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ಕರಾವಳಿಗೆ (Coastal Karnataka) ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಈ ಎರಡೂ ಭಾಗದಲ್ಲಿ ಗುಡುಗು ಮಿಂಚು ಸಹಿತ ಜೋರು ಮಳೆಯಾಗಲಿದೆ. ಇದನ್ನೂ ಓದಿ: ಅರಣ್ಯ ಸಿಬ್ಬಂದಿ, ಬೇಟೆಗಾರರ ನಡುವೆ ಗುಂಡಿನ ಚಕಮಕಿ – ಓರ್ವ ಗುಂಡೇಟಿಗೆ ಬಲಿ
ಬೆಂಗಳೂರಿನನಲ್ಲಿ ತಡ ರಾತ್ರಿ ಮಳೆ ಸುರಿದಿತ್ತು. ಇಂದುಸಂಜೆ ಬಳಿಕ ಬೆಂಗಳೂರಿನಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ.
ಶನಿವಾರ ರಾತ್ರಿ ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ರಾಮನಗರ, ಶಿವಮೊಗ್ಗ ಮಂಡ್ಯ, ಬೆಂಗಳೂರಿನ ಭಾಗದ ಹಲವೆಡೆ ರಾತ್ರಿ ಜೋರು ಮಳೆಯಾಗಿದೆ.