ಬೆಂಗಳೂರು: ಈ ಬಾರಿಯ ದಸರಾ (Dasara) ಸಂಭ್ರಮಕ್ಕೆ ಮಳೆ (Rain) ಅಡ್ಡಿಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ (Coastal Districts) ಭಾರೀ ಮಳೆಯಾಗಲಿದೆ.
ಬಂಗಾಳಕೊಲ್ಲಿಯಲ್ಲಿ (Bay of Bengal) ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಬಾಂಗ್ಲಾದೇಶದ ಕಾಳಿ ದೇವಸ್ಥಾನಕ್ಕೆ ಮೋದಿ ಉಡುಗೊರೆಯಾಗಿ ನೀಡಿದ್ದ ಕಿರೀಟ ಕಳವು
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.
ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಯಲ್ಲಿ ನೀರು ರಭಸದಿಂದ ಹರಿದು ಹೋಗುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.