ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಉತ್ತರ ಒಳನಾಡಿನಲ್ಲಿ ಅ.3ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇದನ್ನೂ ಓದಿ: ಶಕ್ತಿಯುತ ದೇಹ ಹಾಗೂ ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ: ಬೊಮ್ಮಾಯಿ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗುಲಾಬ್ ಚಂಡಮಾರುತ ಪರಿಣಾಮ ಮಹಾರಾಷ್ಟ್ರದ ಮರಾಠವಾಡ ಸೇರಿದಂತೆ ಹಲವೆಡೆ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.