ಹಾಸನ: ನಗರದಲ್ಲಿ ನಿರಂತರವಾಗಿ ಸುರಿದ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಕಾರ್ನಲ್ಲಿದ್ದವರು ಪ್ರಾಣಾಪಾಯದಿಂದ ಪರಾಗಿದ್ದಾರೆ.
ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಹಲವೆಡೆ ಅಂಗಡಿಗಳಿಗೆ ನೀರು ನುಗ್ಗಿದೆ. ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳು ಕೂಡ ನೀರಿನಿಂದ ಆವೃತವಾಗಿದೆ. ರಸ್ತೆ ಮೇಲೆ ನೀರು ತುಂಬಿ ಹರಿಯುತ್ತಿದ್ದು, ಹಾಸನ ನಗರದ ಎಂಜಿ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರ್ ಮೇಲೆ ಮರ ಬಿದ್ದ ಪರಿಣಾಮ ಕಾರ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಇದನ್ನೂ ಓದಿ: ಪಿಎಚ್‍ಡಿ ವಿದ್ಯಾರ್ಥಿನಿಗೆ ಕಿರುಕುಳ – ಪ್ರಾಧ್ಯಾಪಕ ಬಂಧನ
ಸಹ್ಯಾದ್ರಿ ವೃತ್ತದಲ್ಲಿ ಬಟ್ಟೆ ಅಂಗಡಿ, ಬೇಕರಿ ಸೇರಿದಂತೆ ಹಲವು ಅಂಗಡಿಗಳಿಗೆ ನೀರು ನುಗ್ಗಿದೆ. ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕಳೆದ ಮೂರು ದಿನಗಳಿಂದ ಹಾಸನದಲ್ಲಿ ಸಾಧಾರಣ ಮಳೆಯಾಗುತ್ತಿತ್ತು. ಆದರೆ ಇಂದು ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಇದನ್ನೂ ಓದಿ: ಬಿಜೆಪಿಗೆ ವಲಸಿಗರು ಸೊಸೆ ಇದ್ದಂತೆ, ಮನೆಯಲ್ಲಿ ಎಲ್ಲರ ವಿಶ್ವಾಸ ಗಳಿಸಬೇಕು: ಸುಧಾಕರ್