– ಸಕಲೇಶಪುರ ತಾಲೂಕಿನ ಶಾಲಾ-ಕಾಲೇಜುಗಳಿಗೂ ರಜೆ
ಹಾಸನ: ಜಿಲ್ಲೆಯ ಸಕಲೇಶಪುರ, ಬೇಲೂರು, ಆಲೂರು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ (Heavy Rain) ಸುರಿಯುತ್ತಿದ್ದು, ಬೇಲೂರು (Belur) ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ (Holiday) ಘೋಷಿಸಲಾಗಿದೆ.
ಬೇಲೂರು ತಾಲೂಕಿನ ಅರೇಹಳ್ಳಿ, ಬಿಕ್ಕೋಡು, ಚೀಕನಹಳ್ಳಿ ಹೋಬಳಿಗಳು ಹಾಗೂ ಕಸಬಾ ಎ, ಕಸಬಾ ಬಿ ವಲಯದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ಬೇಲೂರು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ 750 ಸಿಗ್ನಲ್‌ಗಳಲ್ಲಿ ರಸ್ತೆ ಸರಿಪಡಿಸಿ – ಜಿಬಿಎಗೆ ಬೆಂಗಳೂರು ಸಂಚಾರಿ ಪೊಲೀಸರ ಪತ್ರ
ಈ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಆಂಧ್ರ ಸಾರಿಗೆ ಸಂಸ್ಥೆಯ ಬಸ್ ಭೀಕರ ಅಪಘಾತ – ಚಾಲಕ, ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವು
ಸಕಲೇಶಪುರ ತಾಲೂಕಿನಲ್ಲಿಯೂ ಧಾರಾಕಾರವಾಗಿ ಮಳೆಯಾಗುತ್ತಿದ್ದು ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಕಾಲೇಜಿಗೆ ರಜೆ ಘೋಷಿಸಿ ತಹಶೀಲ್ದಾರ್ ಸುಪ್ರಿತಾ ಆದೇಶ ಹೊರಡಿದ್ದಾರೆ. ಚಿಕ್ಕಮಗಳೂರು | ಮಲೆನಾಡು ಭಾಗದದಲ್ಲಿ ಭಾರೀ ಮಳೆ – 4 ತಾಲೂಕುಗಳ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ
