ಬೀದರ್: ಬಂಗಾಳ ಕೊಲ್ಲಿಯಲ್ಲಿ (Bay of Bengal) ವಾಯುಭಾರ ಕುಸಿತದ ಪರಿಣಾಮ ಗಡಿ ಜಿಲ್ಲೆ ಬೀದರ್ನಲ್ಲಿ (Bidar) ಸತತ ಎರಡು ಗಂಟೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಭಾರೀ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಔರಾದ್, ಭಾಲ್ಕಿ, ಬೀದರ್ ಸೇರಿದಂತೆ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದೆ. ಧಾರಾಕಾರ ಮಳೆಗೆ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ಮಾಡಲು ವಾಹನ ಸವಾರರು ಹೈರಾಣಾಗಿದ್ದಾರೆ. ಜೊತೆಗೆ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಇದನ್ನೂ ಓದಿ: ಇನ್ಮುಂದೆ ಶೈಕ್ಷಣಿಕ ಪ್ರವಾಸದಲ್ಲಿ ಸರ್ಕಾರಿ ಪದವಿ ವಿದ್ಯಾರ್ಥಿಗಳಿಗೆ ಸೆಲ್ಫಿ, ರೀಲ್ಸ್ ಚಿತ್ರೀಕರಣಕ್ಕೆ ನಿಷೇಧ

ಹವಾಮಾನ ಇಲಾಖೆಯ ಮುನ್ಸೂಚನೆಯಂದೆ ಸತತ ಎರಡು ಗಂಟೆಗಳಿಂದ ಧಾರಾಕಾರ ಮಳೆ ಸುರಿದ್ದಿದ್ದು, ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಬೀದರ್ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

