-ಹಿಲ್ಸ್ ಸ್ಟೇಷನ್ಗಳಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ (Tamilnadu) ಭಾರೀ ಮಳೆಯಾಗುತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಇದರ ನಡುವೆ ಸಿಡಿಲು ಬಡಿದು 14 ಮಂದಿ ಸಾವನ್ನಪ್ಪಿದ್ದು, ಹಲವೆಡೆ ಭೂಕುಸಿತ ಸಂಭವಿಸಿದೆ.
ಈ ಕುರಿತು ಕಂದಾಯ ಸಚಿವ ಕೆ.ಎ. ಸೆಂಗೊಟ್ಟಿಯನ್ (KA Sengottaiyan) ಮಾಹಿತಿ ನೀಡಿದ್ದು, ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಿಡಿಲು ಬಡಿದು ಒಟ್ಟು 14 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಸ್ಥರಿಗೆ ಸರ್ಕಾರ ತಲಾ 4 ಲಕ್ಷ ರೂ. ಪರಿಹಾರ ನೀಡಲಾಗಿದೆ. ಜೊತೆಗೆ ಒಂದೇ ದಿನ ಮಳೆ ಸಂಬಂಧಿತ ಘಟನೆಗಳಲ್ಲಿ 35 ಜನರು ಸಾವನ್ನಪ್ಪಿದ್ದಾರೆಂಬ ವರದಿಗಳು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪ್ರತಿಭಟನೆ Vs ಬಿಜೆಪಿ ಪಾದಯಾತ್ರೆ – ತಿಂಗಳ ಕಾಲ ಬಿಜೆಪಿಯಿಂದ `ಪ್ರಜಾಪ್ರಭುತ್ವ ಉಳಿಸಿ’ ಹೋರಾಟ
ಹವಾಮಾನ ಇಲಾಖೆ ತಮಿಳುನಾಡಿನಾದ್ಯಂತ ರೆಡ್ ಅಲರ್ಟ್ (Red Alert) ಘೋಷಿಸಿದ್ದು, ಭಾರೀ ಮಳೆಯಾಗುತ್ತಿದೆ. ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಜನಪ್ರಿಯ ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಇನ್ನೂ ಭಾರೀ ಮಳೆಯಿಂದಾಗಿ ನೀಲಗಿರಿಯ 62 ಕಡೆಗಳಲ್ಲಿ ಭೂಕುಸಿತ ಉಂಟಾಗಿದ್ದು, ಕೊಡೈಕೆನಾಲ್ನಲ್ಲಿ ಮನೆಗಳು ಜಲಾವೃತವಾಗಿವೆ. ಮೂಂಜಿಕ್ಕಲ್-ಡೊಬಿಕಾನಾ ಪ್ರದೇಶದಲ್ಲಿ 20ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ.ಇದನ್ನೂ ಓದಿ: ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ – ಆರೋಪಿ ಮೊಬೈಲ್ನಲ್ಲಿ ವಾಯ್ಸ್ ನೋಟ್ ಪತ್ತೆ
