ಜಮ್ಮು ಕಾಶ್ಮೀರದಲ್ಲಿ ಭಾರೀ ಮಳೆ – ವರುಣಾರ್ಭಟಕ್ಕೆ ಭೂಕುಸಿತ, ಅಲ್ಲಲ್ಲಿ ಅವಾಂತರ

Public TV
1 Min Read
Jammu Kashmir Rain

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕೆಲವು ಭಾಗಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಅವಾಂತರ ಸೃಷ್ಠಿಯಾಗಿದೆ.

ಪೂಂಚ್ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯ ಮೇಲೆ ಭೂಕುಸಿತವಾಗಿದ್ದು, ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಜೊತೆಗೆ ಮೂವರು ಗಾಯಗೊಂಡಿದ್ದಾರೆ. ಬೈಂಚ್-ಕಾಲ್ಸೇನ್ ಪ್ರದೇಶದಲ್ಲಿರುವ ಶಾಲೆ ಇದಾಗಿದ್ದು, ಶಾಲೆಯ ತಗಡಿನ ಛಾವಣಿ ಮೇಲೆ ದೊಡ್ಡ ಬಂಡೆ ಉರುಳಿದ್ದರಿಂದ ಸಾವು-ನೋವು ಸಂಭವಿಸಿದೆ.ಇದನ್ನೂ ಓದಿ: Breaking | ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್‌ ಧನಕರ್‌ ರಾಜೀನಾಮೆ

ಇನ್ನೂ ರಿಯಾಸಿ ಜಿಲ್ಲೆಯಲ್ಲಿರುವ ಮಾತಾ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ. ಅವಘಡದಲ್ಲಿ ಐವರು ಯಾತ್ರಿಕರು ಸೇರಿದಂತೆ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭೂಕುಸಿತ ಉಂಟಾಗಿದ್ದ ಜಾಗದಲ್ಲಿ ತೆರವು ಕಾರ್ಯಾಚರಣೆ ನಡೆದಿದೆ.

ಮುಂಬೈನಲ್ಲಿ ಇಡೀ ರಾತ್ರಿ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ. ಹೈವೇಗಳಲ್ಲೂ ಮಳೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು. ಉತ್ತರಾಖಂಡ್‌ದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಡೆಹ್ರಾಡೂನ್, ತೆಹ್ರಿ, ಪೌರಿ, ನೈನಿತಾಲ್, ಚಂಪಾವತ್ ಮತ್ತು ಉಧಮ್ ಸಿಂಗ್ ನಗರದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, 1ರಿಂದ 12ನೇ ತರಗತಿವರೆಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಇದನ್ನೂ ಓದಿ: ಇನ್ಮುಂದೆ VIP ಸಂಚಾರದ ವೇಳೆ ಸೈರನ್ ಬಳಕೆ ನಿಷೇಧ

Share This Article