ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ ಬೆಳಗ್ಗೆಯಿಂದ ಬಿಟ್ಟೂ ಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಹುಲಸುರು, ಬೀದರ್ ತಾಲೂಕು, ಭಾಲ್ಕಿಯಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಧಾರಾಕಾರ ಮಳೆಗೆ ಹುಲಸೂರು ತಾಲೂಕಿನ ಇಂಚುರು ಸೇತುವೆ ಮೇಲೆ ಅಪಾರ ಪ್ರಮಾಣದ ನೀರು ಹರಿದು ರಸ್ತೆ ಸಂಚಾರ ಬಂದಾಗಿದೆ.
ಹುಲಸೂರು ಇಂದ ಭಾಲ್ಕಿ ರಸ್ತೆ ಸಂಚಾರ ಬಂದಾಗಿ ವಾಹನ ಸವಾರರು ಪರದಾಡುತ್ತಿದ್ದು ಬೀದರ್ ತಾಲೂಕಿನ ಚಿಲ್ಲರ್ಗಿ ಸೇತುವೆ ಮೇಲೆ ನೀರು ಹರಿದು ರಸ್ತೆ ಸಂಚಾರ ಬಂದಾಗಿದೆ. ಸೇತುವೆ ಮೇಲೆ ನೀರು ಹರಿದು ಪರಿಣಾಮ ರಸ್ತೆ ಸಂಚಾರ ಬಂದಾಗಿದ್ದು, ಚಿಲ್ಲರ್ಗಿ ಟು ಚಿಮ್ಮಕೋಡ್, ಗಾದಗಿ ರಸ್ತೆ ಸಂಚಾರ ಬಂದಾಗಿದೆ. ರಸ್ತೆ ಸಂಚಾರ ಬಂದಾಗಿ ವಾಹನ ಸವಾರರು ಪರದಾಡುತ್ತಿದ್ದರೆ, ಕೆಲವರು ನೀರು ತುಂಬಿದ ರಸ್ತೆ ಮೇಲೆಯ ನಡೆದುಕೊಂಡು ಸೇತುವೆ ದಾಟುತ್ತಿದ್ದಾರೆ.
ಇನ್ನೂ ಕಮಲನಗರದ ಗ್ರಾಮವೊಂದರಲ್ಲಿ ರಸ್ತೆ ಮೇಲೆ ರಭಸವಾಗಿ ಹರಿಯುತ್ತಿರುವ ನೀರಿನಲ್ಲಿ ದಾಟಲು ಎಮ್ಮೆಗಳು ಪರದಾಡಿವೆ. ಮಾಂಜ್ರಾನದಿಗೆ ಲಕ್ಷ ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆ ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಮಾಂಜ್ರಾನದಿ ದಡದಲ್ಲಿರುವ ಲಕ್ಷಾಂತರ ಎಕರೆ ಜಮೀನುಗಳಲ್ಲಿ ಬೆಳೆದಿದ್ದ ಬೆಳಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಧಾರಾಕಾರ ಮಳೆ ಹಾಗೂ ಮಾಂಜ್ರಾನದಿ ಎಫೆಕ್ಟ್ ಜಿಲ್ಲೆಯ ಜನ್ರ ಜೀವನ ಮೂರಾಬಟ್ಟೆಯಾಗಿದ್ದು ಇಂದು ಕೂಡಾ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.


