ವಿಜಯಪುರ: ಶನಿವಾರ ರಾತ್ರಿ ವಿಜಯಪುರ ಜಿಲ್ಲೆಯ ಕೆಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ.
ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ಬೀಸಿದ ಭಾರೀ ಗಾಳಿಗೆ ವಿದ್ಯುತ್ ಕಂಬಗಳು, ಮರಗಳು ಮುರಿದು ಬಿದ್ದಿವೆ. ಇದನ್ನೂ ಓದಿ: ಎಂ ಚಂದ್ರಪ್ಪ ಜೊತೆಗಿನ ಎಂಎಲ್‌ಸಿ ರವಿಕುಮಾರ್ ಸಂಧಾನ ಸಭೆ ವಿಫಲ
Advertisement
Advertisement
ಹಳಗುಣಕಿ ಗ್ರಾಮದ ವಿಶ್ಚನಾಥ ಪಾಟೀಲ್ ಅವರ ದ್ರಾಕ್ಷಿ ತೋಟಕ್ಕೆ ಹಾನಿಯಾಗಿದೆ. ದ್ರಾಕ್ಷಿ ಸಾಲುಗಳ ಮೇಲೆ ವಿದ್ಯುತ್ ಕಂಬಗಳು ಮರ ಬಿದ್ದ ಪರಿಣಾಮ ದ್ರಾಕ್ಷಿ ಬೆಳೆಗಳು ನಾಶವಾಗಿವೆ. ತೋಟಗಾರಿಕಾ ಇಲಾಖೆ ಸೂಕ್ತ ಪರಿಹಾರ ನೀಡಬೇಕೆಂದು ವಿಶ್ವನಾಥ ಪಾಟೀಲ್ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಅವಧಿ ಮೀರಿ ಪಾರ್ಟಿ ಕೇಸ್ – ನಟ ದರ್ಶನ್ ಸೇರಿ 8 ಮಂದಿಗೆ ರಿಲೀಫ್
Advertisement
ಬೊಮ್ಮನಳ್ಳಿ ಗ್ರಾಮದಲ್ಲಿ ಮುರುಗೆಪ್ಪ ಚೌಗುಲಾ ಎಂಬವರು ಬೆಳೆದಿದ್ದ ಒಂದು ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು ಧರೆಗುರುಗಳಿವೆ. ಸುಮಾರು 2 ಲಕ್ಷ ರೂ. ಹಾನಿಯಾಗಿದೆ. ಇಳುವರಿ ಕಟಾವು ಹಂತಕ್ಕೆ ಬಂದಿದ್ದ ಬಾಳೆ ಗಿಡಗಳು ಮುರಿದು ಬಿದ್ದಿದೆ.