ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ (Rain) ಆರ್ಭಟ ಜೋರಾಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಕಡೆ ಅಬ್ಬರಿಸುತ್ತಿರೋ ವರುಣ ಮತ್ತೆ ಅಬ್ಬರಿಸುವ ಮುನ್ಸೂಚನೆ ನೀಡಿದ್ದು, ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
ಆಂಧ್ರಪ್ರದೇಶದ ಕರಾವಳಿಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸಾಧ್ಯತೆ ಇದ್ದು, ರಾಜ್ಯದ ಹಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮುಂದಿನ 5 ದಿನ ರಾಜ್ಯಕ್ಕೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ರಾಜ್ಯದ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಮೂರು ಜಿಲ್ಲೆ ಸೇರಿದಂತೆ ಇಂದು, ನಾಳೆ ಮಲೆನಾಡು ಜಿಲ್ಲೆಗಳಿಗೂ ರೆಡ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಇಂದು ಹಾಗೂ ನಾಳೆ ರೆಡ್ ಅಲರ್ಟ್ ಘೋಷಿಸಿದ್ದು, ಆ.19 ಹಾಗೂ ಆ.20ರಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್ – ನಾಳೆ ಸದನದಲ್ಲಿ ಪರಂ ಉತ್ತರ
ಬೀದರ್, ಕಲಬುರಗಿ, ಯಾದಗಿರಿ, ಬಿಜಾಪುರ, ರಾಯಚೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ ಇಂದಿನಿಂದ ಆ.19ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರಲ್ಲಿ ಆ.17ರಿಂದ ಆ.21ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಬಿಹಾರದಲ್ಲಿ ಮತದಾರರ ಹಕ್ಕುಗಳ ಯಾತ್ರೆಗೆ ಚಾಲನೆ – ಬಿಜೆಪಿ, ಚು. ಆಯೋಗ ವಿರುದ್ಧ ರಾಗಾ ವಾಗ್ದಾಳಿ