ಬೆಂಗಳೂರು: ಎರಡು ವಾರಗಳ ಕಾಲ ಬಿಡುವು ನೀಡಿದ್ದ ಮಳೆರಾಯ ಮತ್ತೆ ರಾಜ್ಯದಲ್ಲಿ ತನ್ನ ಆರ್ಭಟವನ್ನು ಶುರು ಮಾಡಲಿದ್ದಾನೆ. ಮುಂದಿನ ಮೂರು ದಿನ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ಸಿಎಂ ನಿತೀಶ್ ಕುಮಾರ್ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ – 13 ಮಂದಿ ಅರೆಸ್ಟ್
ಆ.23, 24, 25 ರಂದು ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಮಳೆಯಾಗಲಿದ್ದು ಈಗಾಗಲೇ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಅಲ್ಲದೇ ಆ. 24ರ ಬಳಿಕ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಹನಿಟ್ರ್ಯಾಪ್ ಸುಳಿಗೆ ಸಿಲುಕಿ 50 ಲಕ್ಷ ರೂ. ಕಳೆದುಕೊಂಡ ಚಿನ್ನದ ವ್ಯಾಪಾರಿ