– ಗುಜರಾತ್‌ನಲ್ಲಿ ರೆಡ್ ಅಲರ್ಟ್ ಘೋಷಣೆ
ನವದೆಹಲಿ: ರಾಜಸ್ಥಾನ, ಒಡಿಶಾ, ಗುಜರಾತ್ (Gujarat) ಸೇರಿದಂತೆ ವಿವಿಧ ರಾಜ್ಯಗಳಲ್ಲಿಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಈಗಾಗಲೇ ಗುಜರಾತ್‌ಗೆ ರೆಡ್ ಅಲರ್ಟ್ (Red Alert) ಘೋಷಣೆ ಮಾಡಲಾಗಿದೆ. ಸೌರಾಷ್ಟ್ರ ಮತ್ತು ಕಚ್ ಪ್ರದೇಶದಲ್ಲಿ ಸೆಪ್ಟೆಂಬರ್ 6 ಮತ್ತು 7ರ ವರೆಗೆ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಇದನ್ನೂ ಓದಿ: ಅಪಾಯ ಮಟ್ಟ ಮೀರಿದ ಯಮುನಾ ನದಿ – ದೆಹಲಿ ಸಚಿವಾಲಯಕ್ಕೂ ನುಗ್ಗಿದ ಪ್ರವಾಹ ನೀರು
ರಾಜಸ್ಥಾನದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ದೌಸಾ ಜಿಲ್ಲೆಯ ಸಿಕ್ರಿಯಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 104 ಮಿ.ಮೀ ಮಳೆಯಾಗಿದೆ. ಅಲ್ಲದೇ ಮುಂದಿನ 4-5 ದಿನಗಳ ಕಾಲ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.
ದೆಹಲಿ-ಎನ್‌ಸಿಆರ್ ಪ್ರದೇಶಕ್ಕೆ ಯಾವುದೇ ಮಳೆಯ ಎಚ್ಚರಿಕೆ ನೀಡಲಾಗಿಲ್ಲ. ಆದ್ರೆ ಗುರುಗ್ರಾಮ್ ಮತ್ತು ಫರಿದಾಬಾದ್‌ಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ನಗರಗಳಲ್ಲಿ ಹಗುರ ಮಳೆಯಾಗುವ ಸೂಚನೆ ಇದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲೂ ಸ್ವಲ್ಪ ಪ್ರಮಾಣದ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಗೋವಾ | ಹಾಸ್ಟೆಲ್ ರೂಮ್‌ನಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು