– ರಾತ್ರಿ ಸಹ ಮಳೆಯಾಗುವ ಸಾಧ್ಯತೆ
ಬೆಂಗಳೂರು: ಇಂದು ಸಿಲಿಕಾನ್ ಸಿಟಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಮಧ್ಯಾಹ್ನದವರೆಗೆ ಸೂರ್ಯ ತನ್ನ ಪ್ರಖರತೆಯ ಮೂಲಕ ಜನರನ್ನು ಹೈರಾಣು ಮಾಡಿದ್ದ. ಮಧ್ಯಾಹ್ನ 3 ಗಂಟೆಯ ಬಳಿಕ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣಗೊಂಡು ಮಳೆಯಾಗಿದೆ.
ಮೆಜೆಸ್ಟಿಕ್, ಕಾರ್ಪೊರೇಷನ್, ಮಲ್ಲೇಶ್ವರಂ, ಹೆಬ್ಬಾಳ, ಫ್ರೇಜರ್ ಟೌನ್, ಯಶವಂತಪುರ, ವಿಜಯನಗರ ಸೇರಿದಂತೆ ಹಲವೆಡೆ ಬಿರುಸಿನ ಮಳೆಯಾಗಿದೆ. ದಿಢೀರ್ ಮಳೆಯಿಂದಾಗಿ ದ್ವಿಚಕ್ರ ವಾಹನ ಸವಾರರು ಪರದಾಡುವಂತಾಯ್ತು. ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆ ಆರಂಭದ ಮುನ್ಸೂಚನೆ ನೀಡಿದೆ.
Advertisement
ಇಂದು ರಾತ್ರಿ ಸಹ ಬೆಂಗಳೂರು ಸೇರಿದಂತೆ ಸುತ್ತಲಿನ ಪರಿಸರದಲ್ಲಿ ಸಾಧಾರಣ ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಧಾರವಾಡ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಗಳಿವೆ. ರಾಜ್ಯದೆಲ್ಲಡೆ ಬಿಟ್ಟು ಬಿಟ್ಟು ಮಳೆಯಾಗಲಿದೆ ಎಂದು ಪಬ್ಲಿಕ್ ಟಿವಿಗೆ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.