ನವದೆಹಲಿ: ದೆಹಲಿಯಲ್ಲಿ (New Delhi) ಭಾರೀ ಮಳೆ (Heavy Rain) ಸುರಿದ ಪರಿಣಾಮ ನಗರದ ಕೆಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸಗೊಂಡಿದೆ. ಭಾರೀ ಮಳೆಯ ಹಿನ್ನೆಲೆ ಇಂದು ದೆಹಲಿಯಲ್ಲಿ ರೆಡ್ ಅಲರ್ಟ್ (Red Alert) ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಶಾಸ್ತ್ರಿ ಭವನ, ಆರ್‌ಕೆ ಪುರಂ, ಮೋತಿ ಬಾಗ್ ಮತ್ತು ಕಿದ್ವಾಯಿ ನಗರ ಸೇರಿದಂತೆ ದೆಹಲಿ-ಎನ್‌ಸಿಆರ್‌ನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಮಳೆಗೆ ನಗರದ ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತಗೊಂಡಿದೆ. ದೆಹಲಿಯಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯ ಪರಿಣಾಮ ಪಂಚಕುಯಿಯನ್ ಮಾರ್ಗ್, ಮಿಂಟೋ ರಸ್ತೆ, ಮಥುರಾ ರಸ್ತೆ ಹಾಗೂ ಭಾರತ್ ಮಂಟಪದ ಗೇಟ್ ಸಂಖ್ಯೆ 7 ಜಲಾವೃತಗೊಂಡಿದೆ. ಇದನ್ನೂ ಓದಿ: ಆಪರೇಷನ್ ಅಖಾಲ್ | ಭದ್ರತಾ ಸಿಬ್ಬಂದಿ, ಉಗ್ರರ ನಡುವೆ ಗುಂಡಿನ ಚಕಮಕಿ – ಇಬ್ಬರು ಯೋಧರು ಹುತಾತ್ಮ
ಇನ್ನು ಗೌತಮಬುದ್ಧನಗರದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ದೆಹಲಿ, ಎನ್‌ಸಿಆರ್‌ನ ಹೆಚ್ಚಿನ ಸ್ಥಳಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗೋಹಾನಾ, ಸೋನಿಪತ್, ರೋಹ್ಟಕ್, ಸೋಹಾನಾ, ಪಲ್ವಾಲ್, ನುಹ್, ಔರಂಗಾಬಾದ್ ಮತ್ತು ಇತರ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಸಮಾಧಿ ಶೋಧ ಮ್ಯಾರಥಾನ್ – ಐದು ಅಡಿ ಅಗೆದರೂ ಸಿಕ್ಕಿದ್ದು ಬರೀ ಮಣ್ಣು
ಭಾರೀ ಮಳೆಯಿಂದಾಗಿ ಪ್ರತಿಕೂಲ ಹವಾಮಾನ ಉಂಟಾಗಿದ್ದು, ದೆಹಲಿಯಲ್ಲಿ ನೂರಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿದೆ. ಇದನ್ನೂ ಓದಿ: ಪುಟಿನ್ ಭೇಟಿಗೆ ಟ್ರಂಪ್ ಮುಹೂರ್ತ ಫಿಕ್ಸ್ – ಉಕ್ರೇನ್‌ನಲ್ಲಿ ಶಾಂತಿ ಸ್ಥಾಪನೆಗೆ ಮಾತುಕತೆ