– ನದಿ ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ
ನವದೆಹಲಿ: ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ (New Delhi) ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ (Rain) ಯಮುನಾ (Yamuna River) ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪ್ರದೇಶದ ಕೆಲವು ಭಾಗಗಳಲ್ಲಿದ್ದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
ನದಿ ಉಕ್ಕಿ ಹರಿಯುತ್ತಿದ್ದಂತೆ ಯಮುನಾ ಬಜಾರ್‌ನಂತಹ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಹಲವು ಮನೆಗಳ ನೆಲ ಮಹಡಿಗಳು ಜಲಾವೃತಗೊಂಡಿವೆ. ವಸ್ತುಗಳು ಹಾನಿಗೊಂಡಿವೆ ಎಂದು ವರದಿಗಳು ತಿಳಿಸಿವೆ. ಓಕ್ಲಾ, ವಝಿರಾಬಾದ್, ಅಥಿನಿಕುಂಡ ಬ್ಯಾರೇಜ್‌ಗಳಿಂದ ಮೂರು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿಬಿಡಲಾಗುತ್ತಿದ್ದು, ಯಮುನಾ ಸೇತುವೆಯಲ್ಲಿ ನದಿಯ ನೀರು 205.81 ಮೀಟರ್‌ನಲ್ಲಿ ಹರಿಯುತ್ತಿದೆ. ಇದನ್ನೂ ಓದಿ: ಅಲೆಮಾರಿ ಸಮುದಾಯಕ್ಕೆ 1% ಮೀಸಲಾತಿ ಮಾಡಿಸಿ ಕೊಡ್ತೀನಿ – ರಾಯರೆಡ್ಡಿ ಭರವಸೆ
ಅಪಾಯದ ಮಟ್ಟ 205.33 ಮೀಟರ್ ಮೀರಿದೆ ಎಂದು ತಿಳಿದುಬಂದಿದೆ. ಈ ಮಟ್ಟವು ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದ್ದು, ರಾತ್ರಿಯ ವೇಳೆಗೆ 206.41 ಮೀಟರ್ ತಲುಪುವ ಸಾಧ್ಯತೆಯಿದೆ. ನದಿ ಪಾತ್ರದ ಹತ್ತು ಸಾವಿರ ಜನರನ್ನು ಸ್ಥಳಾಂತರ ಮಾಡಿದೆ. ಭಾರಿ ಮಳೆ ಹಿನ್ನೆಲೆ ಶಾಲೆಗಳಿಗೆ ರಜೆ ನೀಡಲಾಗಿದೆ. ಇದನ್ನೂ ಓದಿ: ಛತ್ತೀಸ್‌ಗಢ | ಬಲರಾಂಪುರದಲ್ಲಿ ಅಣೆಕಟ್ಟು ಕುಸಿದು ಪ್ರವಾಹ – ನಾಲ್ವರು ಸಾವು, ಮೂವರು ನಾಪತ್ತೆ