ಹಾಸನ: ಜಿಲ್ಲೆಯ ಬಹುತೇಕ ಕಡೆ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ನಂತರ ಹಾಸನ (Hasan) ನಗರ ಸೇರಿದಂತೆ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಇದರಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡು ವಾಹನ ಸವಾರರು ಪರದಾಡಬೇಕಾಯಿತು.
ಹಾಸನ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿತ್ತು. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತೆ ಇರುವ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿತ್ತು. ಇದನ್ನೂ ಓದಿ: Exit Poll Result | ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟಕ್ಕೆ ಅಧಿಕಾರ – ಬಿಜೆಪಿಗೆ ಹಿಂದಿಗಿಂತ ಹೆಚ್ಚು ಸ್ಥಾನ
ಹಾಸನ, ಚನ್ನರಾಯಪಟ್ಟಣ (Channarayapatna) ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಒಂದು ಕಡೆ ಅತಿವೃಷ್ಟಿ ಮತ್ತೊಂದು ಕಡೆ ಅನಾವೃಷ್ಟಿಯಿಂದ ರೈತರು, ಕಾಫಿ ಬೆಳೆಗಾರರು ತ್ರಿಶಂಕು ಸ್ಥಿತಿಗೆ ಸಿಲುಕಿ ತೊಂದರೆ ಅನುಭವಿಸುವಂತಾಗಿದೆ. ಇದನ್ನೂ ಓದಿ: Exit Poll Results: ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಕನಸು ಭಗ್ನ – ಕಾಂಗ್ರೆಸ್ ಅಧಿಕಾರಕ್ಕೆ