ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಇದೀಗ ಮತ್ತೆ ಶುರುವಾಗಿದೆ. ಹವಾಮಾನ ಇಲಾಖೆ (IMD) ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ.ಇದನ್ನೂ ಓದಿ: ಅಂಗಡಿ ಮಾಲೀಕರೇ ಎಚ್ಚರವಾಗಿರಿ – ನಿಮ್ಮನ್ನು ಬೇರೆ ಕಡೆ ಸೆಳೆದು ದೋಚ್ತಾರೆ ಹಣ
ಕೊಡಗು (Kodagu) ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದಿಂದ ರೆಡ್ ಅಲರ್ಟ್ (Red Alert) ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಗಾಳಿಯೂ 40-50ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ (Orange Alert) ಘೋಷಿಸಿದೆ. ಜೊತೆಗೆ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.
ಬೆಂಗಳೂರು, ಮಂಡ್ಯ, ರಾಮನಗರ ಸೇರಿದಂತೆ ಇನ್ನುಳಿದ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಇದನ್ನೂ ಓದಿ: ಆಷಾಢದ 4ನೇ ಶುಕ್ರವಾರ – ಚಾಮುಂಡಿ ತಾಯಿಗೆ ಸಿಂಹವಾಹಿನಿ ಅಲಂಕಾರ