ಬೆಂಗಳೂರು: ಭಾನುವಾರ ಭಾರೀ ಮಳೆಯಾಗುವ (Rain) ಹಿನ್ನೆಲೆಯಲ್ಲಿ ರಾಜ್ಯದ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (Yellow Alert) ಜಾರಿಯಾಗಿದೆ.
ಬೆಂಗಳೂರು ನಗರ, ಗ್ರಾಮಾಂತರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಯಾವ ಜಿಲ್ಲೆಗಳಿಗೆ ಅಲರ್ಟ್:
ಬೆಂಗಳೂರು ನಗರ, ಗ್ರಾಮಾಂತರ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಣೆಯಾಗಿದೆ.