– 2 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ತಿರುವನಂತಪುರಂ: ಕೇರಳದಲ್ಲಿ (Kerala) ಭಾರಿ ಮಳೆ ಮುಂದುವರಿದಿದ್ದು, ಭೂಕುಸಿತ (Landslide) ಹಾಗೂ ದಿಢೀರ್ ಪ್ರವಾಹದಿಂದಾಗಿ (Flood) ಐವರು ಮೃತಪಟ್ಟಿದ್ದಾರೆ. ಓರ್ವ ವ್ಯಕ್ತಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಮಲಪ್ಪುರಂನಲ್ಲಿ ಪ್ರವಾಹಕ್ಕೆ 5 ಮಂದಿ ಬಲಿ:
ಮಲಪ್ಪುರಂ ಜಿಲ್ಲೆಯ ನೀಲಂಬೂರ್-ಅಮರಂಬಲಂ ಪ್ರದೇಶದಲ್ಲಿ ದಿಢೀರ್ ಪ್ರವಾಹ ಸಂಭವಿಸಿದೆ. ನೀರಿನ ಹರಿವು ಏಕಾಏಕಿ ಹೆಚ್ಚಾದ ಪರಿಣಾಮ ನದಿಗೆ ಇಳಿದಿದ್ದ ಆರು ಮಂದಿ ಕೊಚ್ಚಿಕೊಂಡು ಹೋಗಿದ್ದಾರೆ. ಈ ಪೈಕಿ ಐವರ ಮೃತದೇಹಗಳು ಪತ್ತೆಯಾಗಿದ್ದು, ಮತ್ತೊಬ್ಬರಿಗಾಗಿ ರಕ್ಷಣಾ ತಂಡಗಳು ಶೋಧ ನಡೆಸುತ್ತಿವೆ. ಘಟನೆ ಬಳಿಕ ವಿಶೇಷ ವಿಪತ್ತು ನಿರ್ವಹಣಾ ಪಡೆ ತಂಡವನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ. ನದಿಯ ನೀರಿನ ಮಟ್ಟ ಏಕಾಏಕಿ ಏರಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜಗಳೂರು ಬಂದ್ಗೆ ಬಿಜೆಪಿ ನಾಯಕರ ಕರೆ – ವಾಹನ ಸಂಚಾರ ಸಂಪೂರ್ಣ ಸ್ಥಗಿತ, ಟೈರ್ ಸುಟ್ಟು ಸರ್ಕಾರದ ವಿರುದ್ಧ ಆಕ್ರೋಶ
ಇಡುಕ್ಕಿಯಲ್ಲಿ ಭೂಕುಸಿತಕ್ಕೆ ಇಬ್ಬರು ಬಲಿ:
ಇಡುಕ್ಕಿ ಜಿಲ್ಲೆಯಲ್ಲಿ ಮಳೆಯ ನಡುವೆ ಭೂಕುಸಿತ ಸಂಭವಿಸಿ ಶೆಡ್ವೊಂದರ ಮೇಲೆ ಮಣ್ಣು ಬಿದ್ದಿದೆ. ಮಳೆಯಿಂದ ತಪ್ಪಿಸಿಕೊಳ್ಳಲು ಮಧ್ಯಾಹ್ನ ಸುಮಾರು 3:30ರ ವೇಳೆಗೆ ಮೂವರು ಶೆಡ್ನಲ್ಲಿ ಆಶ್ರಯ ಪಡೆದಿದ್ದರು. ಈ ವೇಳೆ ಕುಸಿತ ಸಂಭವಿಸಿ ಶೆಡ್ ಹಾನಿಗೊಂಡಿದ್ದು, ಅದರೊಳಗೆ ಸಿಲುಕಿದ ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬ ಮಹಿಳೆ ಗಾಯಗೊಂಡಿದ್ದಾರೆ. ಇದನ್ನೂ ಓದಿ: ರಷ್ಯಾ ದಾಳಿಗೆ ಉಕ್ರೇನ್ನ 8 ನಾಗರಿಕರ ಸಾವು
ಕೊಟ್ಟಾಯಂನಲ್ಲಿ ಮಹಿಳೆ ಸಾವು:
ಕೊಟ್ಟಾಯಂ ಜಿಲ್ಲೆಯಲ್ಲೂ ಭೂಕುಸಿತ ಸಂಭವಿಸಿದ್ದು, ತಮಿಳುನಾಡಿನ 35 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಚೆನ್ನೈ ನಿವಾಸಿ ಸಂಗೀತಾ ಸ್ನೇಹಿತೆಯೊಂದಿಗೆ ತಮಿಳುನಾಡಿಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆಗೆ ಮಣ್ಣು ಕುಸಿದು ಬಿದ್ದ ಪರಿಣಾಮ ಸಂಗೀತಾ ಮೃತಪಟ್ಟಿದ್ದಾರೆ. ಅವರ ಸ್ನೇಹಿತೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: Tumakuru | ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು
ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್:
ಭಾರಿ ಮಳೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಸೋಮವಾರ ಕೇರಳದ ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಪತ್ತನಂತಿಟ್ಟ, ಆಳಪ್ಪುಜಾ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ ಹಾಗೂ ತ್ರಿಶೂರ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ತಮಿಳುನಾಡಿಗೆ ನಿರಂತರ ಕಾವೇರಿ ಹರಿವು – ಬರಿದಾಗುತ್ತಿವೆ ಜಲಾಶಯಗಳು
ಈ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಜೊತೆಗೆ ಗಂಟೆಗೆ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯೂ ಇದೆ. ಕೊಲ್ಲಂ, ಪಾಲಕ್ಕಾಡ್ ಹಾಗೂ ಕಣ್ಣೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತ – ಬೆಂಗಳೂರಿಗೆ ಸೇರಿ 10 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್
ಗಂಟೆಗೊಮ್ಮೆ ಪರಿಸ್ಥಿತಿ ಪರಿಶೀಲನೆಗೆ ಸೂಚನೆ:
ರಾಜ್ಯದಲ್ಲಿ ಮಳೆಯ ಪರಿಸ್ಥಿತಿಯನ್ನು ಗಂಟೆಗೊಮ್ಮೆ ಪರಿಶೀಲಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲಾಧಿಕಾರಿಗಳೊಂದಿಗೆ ವಿಪತ್ತು ನಿರ್ವಹಣಾ ಆಯುಕ್ತೆ ವಿಗ್ನೇಶ್ವರಿ ಐಎಎಸ್ ಸಭೆ ನಡೆಸಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಜನರಿಗೆ ಎಸ್ಎಂಎಸ್ ಮೂಲಕ ಎಚ್ಚರಿಕೆ ಸಂದೇಶಗಳನ್ನು ಕಳುಹಿಸಲಾಗಿದೆ. ಅಗತ್ಯವಿದ್ದರೆ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಜೈಲಿನಲ್ಲಿ 5 ಸಜಾಬಂಧಿಗಳಿರುವ ಬ್ಯಾರಕ್ಗೆ ಪವಿತ್ರಾ ಗೌಡ ಶಿಫ್ಟ್; ಇಂದು ಜಾಮೀನು ಅರ್ಜಿ ವಿಚಾರಣೆ
ಮುಂದಿನ ನಾಲ್ಕು ದಿನ ಮಳೆ ಸಾಧ್ಯತೆ:
ಮುಂದಿನ ನಾಲ್ಕು ದಿನಗಳಲ್ಲೂ ಕೇರಳದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಇಂದಿನಿಂದ 3 ದಿನ ವಿಶೇಷ ಅಧಿವೇಶನ – ಕಸ್ತೂರಿ ರಂಗನ್ ವರದಿ, ಬರದ ಬಗ್ಗೆ ಚರ್ಚೆ

