ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಬೆಳಗ್ಗೆಯಿಂದಲೇ ಜಿಲ್ಲೆಯಾದ್ಯಂತ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಯ ಪರಿಣಾಮ ಹಾರಂಗಿ ಜಲಾಶಯಕ್ಕೆ (Harangi Dam) ಒಳಹರಿವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ.
ಮಧ್ಯಾಹ್ನದ ಬಳಿಕ ಜಲಾಶಯಕ್ಕೆ ಸುಮಾರು 9 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದ ಭದ್ರತೆ ಹಾಗೂ ನೀರಿನ ಮಟ್ಟವನ್ನು ನಿಯಂತ್ರಿಸುವ ಉದ್ದೇಶದಿಂದ ಹಾರಂಗಿ ಜಲಾಶಯದಿಂದ ಮತ್ತೆ 11 ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಸೆಮಿಕಂಡಕ್ಟರ್ ಇಕೋಸಿಸ್ಟಂ ಬಲವರ್ಧನೆಗೆ ಅಪ್ಲೈಡ್ ಮೆಟೀರಿಯಲ್ಸ್ ಹೂಡಿಕೆ: ಪ್ರಿಯಾಂಕ್ ಖರ್ಗೆ
ಹಾರಂಗಿಯಿAದ ಭಾರಿ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲೂ ನೀರಿನ ಹರಿವು ಹೆಚ್ಚಾಗುವ ನಿರೀಕ್ಷೆಯಿದೆ. ಜಲಾಶಯದಿಂದ ನೀರು ಬಿಡುಗಡೆಯಾಗಿರುವುದು ಕಾವೇರಿ ನದಿಯ ಆಶ್ರಿತ ಪ್ರದೇಶದ ಜನರಲ್ಲಿ ಹರ್ಷ ಮೂಡಿಸಿದೆ. ಒಟ್ಟಿನಲ್ಲಿ, ಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಾರಂಗಿ ಜಲಾಶಯದ ಒಳಹರಿವನ್ನು ಹೆಚ್ಚಿಸಿದ್ದು, ಕಾವೇರಿ ನದಿಗೂ ಮತ್ತೆ ಭಾರಿ ಪ್ರಮಾಣದ ನೀರು ಹರಿದುಬರುತ್ತಿದೆ. ಇದನ್ನೂ ಓದಿ: ದೆಹಲಿಯಲ್ಲಿ 2,300ರ ಗಡಿ ದಾಟಿದ ಹಂದಿ ಜ್ವರ ಪ್ರಕರಣ – ಶಾಲೆಗಳಿಗೆ ಸರ್ಕಾರ ಕಟ್ಟೆಚ್ಚರ; ಸಿಎಂ ತುರ್ತು ಸಭೆ
