– ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕೋಲಾರ: ಫೆಂಗಲ್ ಚಂಡಮಾರುತದ (Fengal Cyclone) ಪರಿಣಾಮ ಬಯಲುಸೀಮೆ ಕೋಲಾರ (Kolar) ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಮಳೆಯ ಹಿನ್ನೆಲೆ ರೈತರು ಬೆಳೆದ ವಿವಿಧ ಬೆಳೆಗಳು (Crop) ನೆಲಕಚ್ಚಿದೆ.
ನಿರಂತರ ಮಳೆಯ ಪರಿಣಾಮ ಜಿಲ್ಲೆಯಲ್ಲಿ ರೈತರು ಬೆಳೆದ ಅಪಾರ ಪ್ರಮಾಣದ ಬೆಳೆಗಳು ಹಾನಿಯಾಗಿದೆ. ರಾಗಿ, ಅವರೆ, ಟೊಮ್ಯಾಟೊ, ಹಾಗೂ ಹೂವು ಬೆಳೆಗಳಿಗೆ ಹಾನಿಯಾಗಿದೆ. ಮಳೆಯಿಂದ ರೋಗಕ್ಕೆ ತುತ್ತಾಗಿರುವ ಹೂವು ಕೊಳೆಯುವ ಸ್ಥಿತಿಯಲ್ಲಿದ್ದರೆ, ಟೊಮ್ಯಾಟೊ ಬೆಳೆಗೆ ವಿವಿಧ ರೋಗಗಳು ಕಾಣಿಸಿಕೊಂಡಿದೆ. ಅವರೆ ಹೂವು ಉದುರಿ ಹೋಗುತ್ತಿದ್ದು, ಈ ಬಾರಿ ಅವರೆಕಾಯಿ ದುಬಾರಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಇನ್ನೂ ರಾಗಿ ತೆನೆ ಹೊಲದಲ್ಲೇ ನೆನೆದು ಮೊಳಕೆಯೊಡೆಯುತ್ತಿದೆ. ಸದ್ಯ ರೈತರ ಸ್ಥಿತಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಇದನ್ನೂ ಓದಿ: ಹೊಸೂರು ಹೈವೇಯಲ್ಲಿ ತುಂಬಿ ಹರಿದ ಮಳೆ ನೀರು – ವಾಹನ ಸವಾರರು ಪರದಾಟ
ಫೆಂಗಲ್ ಚಂಡಮಾರುತದ ಪರಿಣಾಮ ಕೋಲಾರ ಜಿಲ್ಲೆಯಲ್ಲಿ ರಾತ್ರಿಯಿಡೀ ಜಡಿ ಮಳೆಯಾಗಿದೆ. ಇಂದು ಸಹ ಬೆಳ್ಳಗ್ಗೆಯಿಂದ ಜಿಟಿ ಜಿಟಿ ಮಳೆಯಾಗುತ್ತಿದೆ. ಮಳೆಯಿಂದ ಜನರು ಬೆಚ್ಚನೆಯ ಉಡುಪುಗಳ ಮೊರೆ ಹೋಗಿದ್ದಾರೆ. ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಶೀತಗಾಳಿಗೆ ಜನರು ಆತಂಕಪಡುವಂತಾಗಿದೆ. ಶೀತಗಾಳಿ ಮತ್ತು ಮಳೆಗೆ ಮನೆಯಿಂದ ಹೊರ ಬರಲು ಜನರು ಹಿಂದೇಟು ಹಾಕುತ್ತಿದ್ದಾರೆ. ಇದನ್ನೂ ಓದಿ: ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸೀಟ್ ಬ್ಲಾಕ್ ದಂಧೆ ಪ್ರಕರಣ – ಕಿಂಗ್‌ಪಿನ್ ಸೇರಿ 10 ಮಂದಿ ಅರೆಸ್ಟ್
ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇಂದು ಕೂಡಾ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಮಕ್ಕಳ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆ ಅಧಿಕಾರಿಗಳ ಸಲಹೆ ಮೇರೆಗೆ ಎರಡನೇ ದಿನವು ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ಅಕಾಲಿಕ ಮಳೆಗೆ ವಾಹನ ಸವಾರರು ಪರದಾಡುವಂತಾಗಿದೆ. ಇದನ್ನೂ ಓದಿ: ಡಿ.22 ರಂದು ಹಸೆಮಣೆ ಏರಲಿದ್ದಾರೆ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು