ಬೆಂಗಳೂರು: ನಗರದ (Bengaluru) ಹಲವೆಡೆ ಭಾರೀ (Rain) ಮಳೆಯಾಗುತ್ತಿದೆ. ರೇಸ್ ಕೋರ್ಸ್, ಶೇಷಾದ್ರಿಪುರಂ,ಮಲ್ಲೇಶ್ವರಂ ಸುತ್ತಮುತ್ತ ಹೆಚ್ಚಿನ ಮಳೆಯಾಗುತ್ತಿದೆ.
ಕೆ.ಆರ್ ಮಾರ್ಕೆಟ್, ಚಾಮರಾಜಪೇಟೆ, ಮೈಸೂರು ರೋಡ್, ಯಶವಂತಪುರ ಸೇರಿ ಹಲವೆಡೆ ಮಳೆ ಸುರಿಯುತ್ತಿದೆ. ಧಿಡೀರ್ ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ. ಬಸ್ ನಿಲ್ದಾಣಗಳಲ್ಲಿ ಬೈಕ್ ಸವಾರರು ಆಶ್ರಯ ಪಡೆದಿದ್ದಾರೆ. ಇದನ್ನೂ ಓದಿ: ಮಂಗಳೂರು| ಸಿಎಂ ವಿಜಯ್‌ಗೆ ಸ್ವಾಮಿ ವಿವೇಕಾನಂದರ ಪುಸ್ತಕ ಉಡುಗೊರೆ
ಮುಂದಿನ ಎರಡು ಗಂಟೆಗಳಲ್ಲಿ 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಹಾಸನ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಬಂಡೀಪುರದಲ್ಲಿ ಹುಲಿಯ ಗಾಂಭೀರ್ಯ ನಡಿಗೆ; ಮರಿಗಳಿಗೆ ಹೆಗಲಾದ ತಾಯಿ ಕರಡಿ
